SHIMOGA NEWS, 18 OCTOBER 2024 : ಕರ್ನಾಟಕ ರಾಜ್ಯೋತ್ಸವ (Rajyotsava) ಆಚರಣೆ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ನವೆಂಬರ್ 1ರಂದು ರಾಜ್ಯೋತ್ಸವದ ಹಿನ್ನೆಲೆ ಯಾವೆಲ್ಲ ಕಾರ್ಯಕ್ರಮ ಆಯೋಜಿಸಬೇಕು ಎಂಬುದರ ಕುರಿತು ಸೂಚನೆ ನೀಡಿದರು.
ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?
ನ.1ರಂದು ಬೆಳಗ್ಗೆ 8 ಗಂಟೆಗೆ ಸೈನ್ಸ್ ಮೈದಾನದಿಂದ ಮೆರವಣಿಗೆ ನಡೆಯಲಿದೆ. ಪೊಲೀಸ್, ಗೃಹ ರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್, ಡೊಳ್ಳು ಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲಿವೆ. ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಇರಲಿದ್ದಾರೆ. ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಲಿದೆ.
ನಗರದ ಡಿಎಅರ್ ಮೈದಾನದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಧ್ವಜಾರೋಹಣ ನೆರವೇರಲಿದ್ದು ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ಕಚೇರಿ ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ರಾಜ್ಯೋತ್ಸವದ ಹಿನ್ನೆಲೆ ಪ್ರಮುಖ ರಸ್ತೆ, ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಮೆಸ್ಕಾಂ, ಮಹಾನಗರ ಪಾಲಿಕೆ ಅಧಿಕಾರಿಗಳು ಈ ವ್ಯವಸ್ಥೆ ನಿರ್ವಹಿಸಬೇಕು. ಧ್ವನಿವರ್ಧಕದ ಮೂಲಕ ರಾಜ್ಯ ಮತ್ತು ದೇಶ ಭಕ್ತಿಗೀತೆಗಳನ್ನು ಪ್ರಸಾರ ಮಾಡಬೇಕು. ಅಬಕಾರಿ ಇಲಾಖೆ, ನೋಂದಣಿ ಮತ್ತು ವಾಣಿಜ್ಯ ತೆರಿಗೆ ಇಲಾಖೆಗಳ ಇದರ ಜವಾಬ್ದಾರಿ ನಿರ್ವಹಿಸಬೇಕು.
ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ
ಸಂಜೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇದನ್ನು ನಿರ್ವಹಿಸಬೇಕು. ಸಮಾರಂಭದ ಸ್ಥಳದಲ್ಲಿ ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಇದೇ ವೇಳೆ ವಿವಿಧ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗೆ ಜವಾಬ್ದಾರಿ ನೀಡಿದರು.
ಇದನ್ನೂ ಓದಿ » ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್ ರಿಲೀಸ್
ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನಗರ್ ಸೇರಿದಂತೆ ಹಲವರು ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200