ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್ ನ್ಯೂಸ್ ಅಪ್‌ಡೇಟ್
ಏನೆಲ್ಲ ಆದೇಶ ಹೊರಡಿಸಿದ್ದಾರೆ?
» ಬೈಕ್ ರ‍್ಯಾಲಿ ನಿಷೇಧ
ಶಿವಮೊಗ್ಗ ಲೈವ್.ಕಾಂ : ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 6 ರಿಂದ ಸೆ. 20 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

» ತೆಪ್ಪ ಬಳಕೆಗೆ ಪ್ರಮುಖ ಸೂಚನೆ
ಶಿವಮೊಗ್ಗ ಲೈವ್.ಕಾಂ : ಗಣೇಶ ಮೂರ್ತಿಗಳನ್ನು ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭ ತೆಪ್ಪ ಬಳಕೆಗೆ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ಸೂಚನೆ ನೀಡಿ ಆದೇಶಿಸಿದ್ದಾರೆ. ತೆಪ್ಪದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ಹೋಗಲು ಅವಕಾಶ ನೀಡಬೇಕು. ಕಡ್ಡಾಯವಾಗಿ ಲೈಫ್ ಜಾಕೆಟ್ ಬಳಸಬೇಕು. ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಆದೇಶಿಸಿದ್ದಾರೆ.
» ಡಿಜೆ ನಿಷೇಧ
ಶಿವಮೊಗ್ಗ ಲೈವ್.ಕಾಂ : ಜಿಲ್ಲೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 7 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





