SHIVAMOGGA LIVE NEWS | 2 NOVEMBER 2022
SHIMOGA | ನಗರದ ಹೃದಯ ಭಾಗದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ, ಕಮಿಷನರ್ ಅವರು ಖುದ್ದು ಫೀಲ್ಡಿಗಿಳಿದಿದ್ದು, ಮೂರು ಗಂಟೆಗು ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದರು. (clear footpath)
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ರಕ್ಷಣಾಧಿಕಾರಿ ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಲಾಯಿತು.
(clear footpath)
ಎಲ್ಲೆಲ್ಲಿ ಕಾರ್ಯಾಚರಣೆ ನಡೆಯಿತು?
ಇವತ್ತು ಸಂಜೆ ಅಧಿಕಾರಿಗಳ ತಂಡ ಗಾಂಧಿ ಬಜಾರ್ ಮತ್ತು ಅದಕ್ಕೆ ಹೊಂದಿಕೊಂಡಂತೆ ಇರುವ ಬಡಾವಣೆಗಳಲ್ಲಿ ಕಾರ್ಯಾಚರಣೆ ನಡೆಸಿತು. ಗಾಂಧಿ ಬಜಾರ್ ಮುಖ್ಯ ರಸ್ತೆ, ಸಿದ್ಧಯ್ಯ ರಸ್ತೆ, ಎಂಕೆಕೆ ರಸ್ತೆ, ಕಸ್ತೂರ ಬಾ ರೋಡ್, ಕೆ.ಆರ್.ಪುರಂ ರಸ್ತೆಗಳಲ್ಲಿ ಫುಟ್ ಪಾತ್ ತೆರವು ಕಾರ್ಯ ನಡೆಸಿತು. ವಾಹಗಳನ್ನು ನಿಲ್ಲಿಸಿ ಕಾಲ್ನಡಿಗೆಯಲ್ಲೇ ಬಡಾವಣೆಗಳನ್ನು ಸುತ್ತಿದರು. ಪ್ರತಿ ಅಂಗಡಿ, ಮನೆ ಮುಂದೆ ಒತ್ತುವರಿ ಆಗಿರುವುದನ್ನು ಪರಿಶೀಲಿಸಿದರು.
(clear footpath)
ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?
ಗಾಂಧಿ ಬಜಾರ್ ನಲ್ಲಿ ರಸ್ತೆಯಲ್ಲೇ ತಳ್ಳು ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ನಡೆಸುತ್ತಿರುವವರು, ಫುಟ್ ಪಾತ್ ಮೇಲೆ ವ್ಯಾಪಾರ ಮಾಡುವವರು, ಅಂಗಡಿಗಳ ವಸ್ತುಗಳನ್ನು ಫುಟ್ ಪಾತ್ ಮೇಲೆ ಪ್ರದರ್ಶನಕ್ಕೆ ಇಟ್ಟಿರುವುದು ಗಮನಕ್ಕೆ ಬಂತು. ಇವುಗಳನ್ನು ಕೂಡಲೆ ತೆರವು ಮಾಡುವಂತೆ ಸೂಚಿಸಲಾಯಿತು. ಒಂದು ವೇಳೆ ತೆರವು ಮಾಡದೆ ಇದ್ದರೆ ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಎಚ್ಚರಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗೆ ಸಹಾಯವಾಣಿ, ಸಿಗಲಿದೆ 4 ರೀತಿಯ ನೆರವು
ಸಿದ್ದಯ್ಯ ರಸ್ತೆ, ಎಂಕೆಕೆ ರೋಡ್, ಕೆ.ಆರ್. ಪುರಂ ರಸ್ತೆಯಲ್ಲಿ ಫುಟ್ ಪಾತ್, ಚರಂಡಿ ಒತ್ತುವರಿ ಆಗಿರುವುದು ಅಧಿಕಾರಿಗಳ ಗಮನಕ್ಕೆ ಬಂತು. ಬೆಳಗಾಗುವುದರಲ್ಲಿ ಇವುಗಳನ್ನು ತೆರವು ಮಾಡದಿದ್ದರೆ ಜೆಸಿಬಿ ಕರೆಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ನಗರದ 22 ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ
ಕೆಲವು ಕಡೆ ಅಂಗಡಿಯ ಹೊರಗೆ ಗೋಡೆ ನಿರ್ಮಿಸಿ ಸಣ್ಣದಾಗಿ ಗೋಡೊನ್ ಮಾದರಿ ನಿರ್ಮಿಸಲಾಗಿತ್ತು. ಫುಟ್ ಪಾತ್ ಮೇಲೆ ಅಂಗಡಿ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಬಿಸಿಲು, ಮಳೆಯಿಂದ ರಕ್ಷಣೆಗೆ ಅಂಗಡಿಗಳ ಮುಂದೆ ಶೀಟ್ ಹಾಕಲಾಗಿದೆ. ವಿವಿಧ ತಿನಿಸು ಅಂಗಡಿಗಳು, ಗ್ಯಾರೇಜ್, ಬಟ್ಟೆ ಅಂಗಡಿಗಳು ಫುಟ್ ಪಾತನ್ನೆ ಕಬಳಿಸಿವೆ. ಇವುಗಳನ್ನು ತೆರವು ಮಾಡುವಂತೆ ಮಾಲೀಕರಿಗೆ ಎಚ್ಚರಿಸಿದರು.
ಗಾಂಧಿ ಬಜಾರ್ 2ನೇ ಅಡ್ಡರಸ್ತೆಯಲ್ಲಿ ಕಟ್ಟಡಗಳಿಗೆ ತಾಗುವಂತೆ ಕರೆಂಟ್ ವಯರ್ ಹಾದು ಹೋಗಿದೆ. ಇವುಗಳಿಂದ ಅಕ್ಕಪಕ್ಕದ ಕಟ್ಟಡದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ ಎಂದು ಸ್ಥಳೀಯರು ದೂರಿದರು. ಈ ಕುರಿತು ಮೆಸ್ಕಾಂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
(clear footpath)
ಕಸ ತೆರವಿಗೆ ಸೂಚನೆ
ಕೆ.ಆರ್.ಪುರಂ ರಸ್ತೆ, ಎಂಕೆಕೆ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ರಾಶಿ ಕಸ ಬಿದ್ದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಗರಂ ಆದರು. ಇಲ್ಲಿನ ಕಸವನ್ನು ನಾಳೆ ಬೆಳಗ್ಗೆ ತೆರವು ಮಾಡಬೇಕು ಎಂದು ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರಿಗೆ ಸೂಚಿಸಿದರು.
ಎ.ಎ. ಸರ್ಕಲ್ ನಲ್ಲಿ ಬಿಗಿ ಕ್ರಮ
ಇನ್ನು, ಅಮೀರ್ ಅಹಮದ್ ಸರ್ಕಲ್ ನಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಿತು. ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಎ.ಎ. ಸರ್ಕಲ್ ವರೆಗೆ ತಳ್ಳುಗಾಡಿ ವ್ಯಾಪಾರ, ಫುಟ್ ಪಾತ್ ಮೇಲೆ ಅಂಗಡಿಯ ವಸ್ತುಗಳನ್ನು ಇಟ್ಟು ವ್ಯಾಪಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಭಾಗದಲ್ಲಿ ವಾಹನ ನಿಲುಗಡೆ ಮಾಡಿದರೆ ಕೂಡಲೆ ದಂಡ ವಿಧಿಸಬೇಕು, ಇಲ್ಲವೆ ವಾಹವನ್ನು ವಶಕ್ಕೆ ಪಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸಂಚಾರಿ ಪೊಲೀಸರಿಗೆ ಸೂಚನೆ ನೀಡಿದರು.
ಫುಟ್ ಪಾತ್ ಮತ್ತು ರಸ್ತೆ ಒತ್ತುವರಿ ಮಾಡಿಕೊಂಡಿರುವುದರಿಂದ ಗಾಂಧಿ ಬಜಾರ್ ಮತ್ತು ಸುತ್ತಮುತ್ತಲ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಕುರಿತು ದೂರು ಕೇಳಿ ಬಂದಿತ್ತು. ಇವತ್ತು ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿರುವುದು ಈ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅನುಕೂಲವಾಗುವ ಸಾಧ್ಯತೆ ಇದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ವಿದೇಶದಲ್ಲಿ ಓದಲು ಸಾಲ ಸೌಲಭ್ಯ, ಆನ್ ಲೈನ್ ಅರ್ಜಿ ಭರ್ತಿಗೆ ಸೂಚನೆ, ಯಾರೆಲ್ಲ ಅರ್ಜಿ ಹಾಕಬಹುದು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.