ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020
ಲಾಕ್ಡೌನ್ ಆದೇಶ ಉಲ್ಲಂಘಿಸಿ ಹೊರ ಬರುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, ಈಗ ಗಲ್ಲಿಗಲ್ಲಿಗಳಲ್ಲಿ ಬ್ಯಾಡ್ಮಿಂಟನ್ ಆಡುವವರು, ಸೈಕ್ಲಿಂಗ್ ಮಾಡುವವರಿಗೆ ವಾರ್ನಿಂಗ್ ನೀಡುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೆ ಫೀಲ್ಡಿಗಿಳಿದಿದ್ದು, ಬ್ಯಾಡ್ಮಿಂಟನ್ ಆಡುವವರಿಗೆ ಎಚ್ಚರಿಕೆ ನೀಡಿದ್ದಾರೆ. ಬ್ಯಾಡ್ಮಿಂಟನ್ ಬ್ಯಾಟು, ನೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಇವತ್ತು ರವೀಂದ್ರನಗರದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ದಿಢೀರ್ ದಾಳಿ ನಡೆಸಿ ಯುವಕರಿಗೆ ವಾರ್ನಿಂಗ್ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಸೈಕಲ್ ರೈಡರ್ಗಳಿಗೆ ಖಡಕ್ ಎಚ್ಚರಿಕೆ
ಲಾಕ್ಡೌನ್ ಇದ್ದರು ಶಿವಮೊಗ್ಗದಲ್ಲಿ ಸೈಕ್ಲಿಂಗ್ ಮಾಡುತ್ತಿದ್ದವರನ್ನ ತಡೆದು ಜಿಲ್ಲಾ ರಕ್ಷಣಾಧಿಕಾರಿ ಅವರೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಲಾಕ್ಡೌನ್ ಸಂದರ್ಭ ಮನೆಯಿಂದ ಹೊರಬರುವುದಕ್ಕೆ ನಿಷೇಧವಿದೆ. ಹೀಗಿದ್ದು ಹಲವು ಬಡಾವಣೆಗಳಲ್ಲಿ ಗಲ್ಲಿ ಕ್ರಿಕೆಟ್, ಬ್ಯಾಡ್ಮಿಂಟನ್ ಆಡಲಾಗುತ್ತಿದೆ. ಈಗಾಗಲೇ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೆ ಬ್ಯಾಡ್ಮಿಂಟನ್ ಆಡಲು ತೆರಳಿದ್ದವನ್ನು ತಡೆದು, ವಾರ್ನಿಂಗ್ ಕೊಟ್ಟು, ಬ್ಯಾಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಕೆಲವರು ಟೈಮ್ ಪಾಸ್ಗಾಗಿ ಹೊರಗೆ ಬರುತ್ತಿದ್ದಾರೆ. ಇದರಿಂದ ಕರೋನ ಸೋಂಕು ಹರಡಬಹುದು ಎಂಬ ಕಾರಣಕ್ಕೆ ಮನೆಯಿಂದ ಹೊರಬರಬಾರದು ಎಂದು ಪೊಲೀಸರು ವಾರ್ನಿಂಗ್ ನೀಡುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]