ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ಶಿವಮೊಗ್ಗ ನಗರದ ಕೆಲವು ಕಡೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವ್ಯಾಪಾರಿಗಳ ಜೊತೆಗೆ ಚರ್ಚೆ ನಡೆಸಿದರು.
ಗಾಂಧಿ ಬಜಾರ್ ಮತ್ತು ಬಿ.ಹೆಚ್.ರಸ್ತೆಯ ವಿವಿಧೆಡೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಭೇಟಿ ನೀಡಿದರು. ಇಲ್ಲಿ ವ್ಯಾಪಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ವ್ಯಾಪಾರಿಗಳು ಲಾಕ್ಡೌನ್ ನಿಯಮ, ವ್ಯಾಪಾರ ನಡೆಸುವಾಗ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಎಂದು ಸೂಚಿಸಿದರು. ಇನ್ನು, ಕೆಲವು ಅಂಗಡಿಗಳಲ್ಲಿ ತೂಕ ಮತ್ತು ಅಳತೆ ಮಾಪನವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ಕುಸಿದು ಬಿದ್ದ ವೃದ್ಧರೊಬ್ಬರು ಆಸ್ಪತ್ರೆಗೆ
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಪರಿಶೀಲನೆ ವೇಳೆ ಬ್ಯಾಂಕ್ ಕೆಲಸಕ್ಕೆ ಬಂದಿದ್ದ ವೃದ್ಧರೊಬ್ಬರು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೂಚಿಸಿದರು. ಪೊಲೀಸ್ ವಾಹನದಲ್ಲಿಯೇ ವೃದ್ಧರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






