ತಾಲೂಕು ಅಧಿಕಾರಿಗಳ ಜೊತೆ ಡಿಸಿ ವಿಡಿಯೋ ಕಾನ್ಫರೆನ್ಸ್, ಕೃತಕ ನೆರೆ ಸೃಷ್ಟಿಯಾದರೆ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳೆ ಹೊಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020

ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲಾ ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಳೆಗಾಲದ ಪೂರ್ವಸಿದ್ಧತೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸೂಚನೆಗಳನ್ನು ನೀಡಿದರು.

https://www.facebook.com/liveshivamogga/videos/1129386937427698/?t=0

ಮಳೆಗಾಲದ ಸಂದರ್ಭ ಚರಂಡಿ ತುಂಬಿ ಯಾವುದೇ ಕಾರಣಕ್ಕೂ ನೀರು ಹೊರಗೆ ಹರಿಯುವ ಪರಿಸ್ಥಿತಿ ಎಲ್ಲಿಯೂ ಕಾಣಿಸಬಾರದು. ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆ ಸೃಷ್ಟಿಯಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಯನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

https://www.facebook.com/liveshivamogga/videos/2299124960381441/?t=4

ಮಳೆಗಾಲದಲ್ಲಿ ಪ್ರವಾಹ ಸಾಧ್ಯತೆಯಿರುವ ಗ್ರಾಮಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಗ್ರಾಮಗಳ ಸಂಖ್ಯೆಗೆ ಅನುಗುಣವಾಗಿ ಪರಿಹಾರ ಕೇಂದ್ರಗಳಿಗೆ ಈಗಲೇ ಸ್ಥಳವನ್ನು ಗುರುತಿಸಿ ನೋಡಲ್ ಅಧಿಕಾರಿಯನ್ನು ಸಹ ನಿಯೋಜಿಸಬೇಕು. ಮಳೆಯಿಂದ ಕೆರೆ ಕಟ್ಟೆ, ನಾಲೆಗಳು ತುಂಬಿ ಅನಾಹುತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಬೇಕು ಎಂದರು.

ಹಿಂದಿನ ಮಳೆಗಾಲದ ಅವಧಿಯಲ್ಲಿ ಒಡೆದು ಹೋಗಿ ದುರಸ್ತಿ ಮಾಡಲಾಗಿರುವ ಕೆರೆ ಕಟ್ಟೆಗಳನ್ನು ಈಗಲೇ ಪರಿಶೀಲನೆ ನಡೆಸಬೇಕು. ತುಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಅವಕಾಶ ನೀಡಬಾರದು. ನೀರಿನ ಒಳ ಹರಿವಿನ ಮೇಲೆ ನಿರಂತರ ನಿಗಾ ಇರಿಸಿ, ಜಲಾಶಯದಿಂದ ನೀರು ಬಿಡುವ ಕುರಿತು ನಿರಂತರ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿರಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬ್ಲೀಚಿಂಗ್ ಪೌಡರ್ ಮತ್ತಿತರ ಸಾಮಾಗ್ರಿಗಳು ದಾಸ್ತಾನಿರಿಸಬೇಕು ಎಂದು ಹೇಳಿದರು.

https://www.facebook.com/liveshivamogga/videos/749247015882154/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment