ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಅವ್ಯವಹಾರ ಆರೋಪದ ಹಿನ್ನೆಲೆ ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ (ಡಿಸಿಸಿ) ಅಧಿಕಾರಿಗಳು ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನದಿಂದ ಪರಿಶೀಲನೆ ನಡೆಯುತ್ತಿದೆ.
ಯಾವೆಲ್ಲ ಅಧಿಕಾರಿಗಳು ಪರಿಶೀಲನೆಯಲ್ಲಿದ್ದಾರೆ?
ಸಹಕಾರ ಇಲಾಖೆ ಜಾಯಿಂಟ್ ರಿಜಿಸ್ಟ್ರಾರ್ ನೇತೃತ್ವದ ತಂಡ ದಾಖಲಾತಿ ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನಿಂದ ಐದು ಮಂದಿ ಅಧಿಕಾರಿಗಳ ತಂಡ ಬ್ಯಾಂಕ್ ವ್ಯವಹಾರಗಳ ಕುರಿತು ನಿರಂತರ ಮಾಹಿತಿ ಸಂಗ್ರಹಿಸುತ್ತಿದೆ.
ಪೊಲೀಸ್ ಭದ್ರತೆಯಲ್ಲಿ ಪರಿಶೀಲನೆ
ಒಮ್ಮೆ ಬೆಂಗಳೂರಿನಿಂದ ಆಗಮಿಸಿದ್ದ ಅಧಿಕಾರಿಗಳ ತಂಡಕ್ಕೆ ಪರಿಶೀಲನೆಗೆ ಅವಕಾಶ ನೀಡಿರಲಿಲ್ಲ ಎಂಬ ಆರೋಪವಿದೆ. ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಈ ಕುರಿತು ಆರೋಪಿದ್ದರು. ಬ್ಯಾಂಕ್ನ ಎಂ.ಡಿ ಅವರು ಪರಿಶೀಲನೆಗೆ ಅಡ್ಡಿಮಾಡಿದ್ದರು ಎಂದಿದ್ದರು. ಇದೇ ಕಾರಣಕ್ಕೆ ಈ ಬಾರಿ ಪರಿಶೀಲನೆಗೆ ಬರುವ ಮುನ್ನವೇ ಅಧಿಕಾರಿಗಳು ಪೊಲೀಸ್ ಭದ್ರತೆ ಪಡೆದುಕೊಂಡಿದ್ದಾರೆ.
ಏನಿದು ಅವ್ಯವಹಾರ?
ರಾಜ್ಯ ಸರ್ಕಾರದ ಅನುಮತಿ ಪಡೆಯದೆಯೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ವತಿಯಿಂತ ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಮಗ್ರ ತನಿಖೆಗೆ ಸಹಕಾರ ಸಚಿವರಿಗೆ ಮನವಿ ಮಾಡಿದ್ದರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422