ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಮೇ 2020
ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಕೋಟಿ ಕೋಟಿಯ ಸಾಲ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇವತ್ತು ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಿಬಿಐ ತನಿಖೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ.
ಸಿಬಿಐ ತನಿಖೆಗೆ ಒತ್ತಾಯವೇಕೆ?
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ರೈತರಿಗೆ ನೆರವಾಗುವ ಯೋಜನೆಗಳನ್ನು ರೂಪಿಸಿಲ್ಲ. ಇದರ ಬದಲು ಹೊರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ 95 ಕೋಟಿಗಿಂತಲೂ ಹೆಚ್ಚಿನ ಸಾಲ ನೀಡಿದೆ. ಇದರ ಜೊತೆಗೆ ಅನೇಕ ಅಕ್ರಮಗಳನ್ನು ಎಸಗಿದೆ. ಈ ಹಿನ್ನೆಯಲ್ಲಿ ಕ್ರಮ ಕೈಗೊಳ್ಳಬೇಕಿದ್ದು ಸಿಬಿಐ ತನಿಖೆ ನಡೆಸುವಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.
ಶಾಸಕ ಆರಗ ಜ್ಞಾನೇಂದ್ರ ಅವರು ವಿಷಯ ಮಂಡನೆ ಬಳಿಕ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















