ಡಿಸಿಸಿ ಬ್ಯಾಂಕ್ನಲ್ಲಿ ಮಂಜುನಾಥಗೌಡ ನಿರ್ದೇಶಕ ಸ್ಥಾನ ಅನೂರ್ಜಿತ, ನಿಗದಿಯಾಗಿದ್ದ ಚುನಾವಣೆ ಕ್ಯಾನ್ಸಲ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನಲ್ಲಿ (ಡಿಸಿಸಿ ಬ್ಯಾಂಕ್) ಖಾಲಿ ಇದ್ದ ನಿರ್ದೇಶಕರ ಸ್ಥಾನಕ್ಕೆ ನಡೆಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ. ಮೇ 29ಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿತ್ತು.

ಈ ಸಂಬಂಧ ಸಹಕಾರ ಸಂಘಗಳ ಚುನಾವಣಾಧಿಕಾರಿ ಅವರ ಆದೇಶ ಹೊರಡಿಸಿದ್ದಾರೆ. ಚುನಾವಣೆ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳ ಕೊರತೆ ಇರುವುದರಿಂದ ನಿರ್ದೇಶಕರ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ  | ಶಿವಮೊಗ್ಗ ಡಿಸಿಸಿ ಬ್ಯಾಂಕ್ನಿಂದ ಮಂಜುನಾಥಗೌಡ ಹೊರಕ್ಕೆ, ಅಧಿಕಾರ ಸ್ವೀಕರಿಸಿದರು ನೂತನ ಅಧ್ಯಕ್ಷರು

ಶೇ.50ರಷ್ಟು ಸಿಬ್ಬಂದಿಯನ್ನು ಕರೋನ ನಿರ್ವಹಣೆ ಕರ್ತವ್ಯಕ್ಕೆ ಬಳಕೆ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಇದರಿಂದ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಮತ್ತೊಂದೆಡೆ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಮುಂದಿನ ಆದೇಶ ಬರುವವರೆಗೆ ರಾಜ್ಯಾದ್ಯಂತ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳಿಗೆ ನಡೆಯಬೇಕಿದ್ದ ಚುನಾವಣೆಗಳನ್ನು ಮುಂದೂಡಲಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ನಿರ್ದೇಶಕ ಸ್ಥಾನವನ್ನು ಅನೂರ್ಜಿತಗೊಳಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment