ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಿಕೆ, ಕಾರಣವೇನು?

SHIVAMOGGA LIVE NEWS | 22 MARCH 2024

SHIMOGA : ಡಿಸಿಸಿ (ಜಿಲ್ಲಾ ಕೇಂದ್ರ ಸಹಕಾರ) ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಅಧಿಸೂಚನೆ ಹೊರಟ ಬೆನ್ನಲ್ಲೆ ಸರ್ಕಾರ ಚುನಾವಣೆಯನ್ನು ಮುಂದೂಡಿ ಆದೇಶಿಸಿದೆ. ಅಧಿಸೂಚನೆ ಪ್ರಕಾರ ಗುರುವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೂ.6ರವರೆಗೆ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಯನ್ನು ಮುಂದೂಡಲಾಗಿದೆ.

ಡಿಸಿಸಿ ಬ್ಯಾಂಕ್ ಮಾತ್ರವಲ್ಲದೆ ಮಾರ್ಚ್ ನಿಂದ ಜೂ.6ರೊಳಗೆ ಆಡಳಿತ ಮಂಡಳಿಗೆ ನಡೆಯಬೇಕಿದ್ದ ಎಲ್ಲ ಸಹಕಾರ ಸಂಘಗಳ ಚುನಾವಣೆಯನ್ನೂ ಮುಂದೂಡಲಾಗಿದೆ. ಅಲ್ಲಿಯವರೆಗೂ ಹಾಲಿ ಆಡಳಿತ ಮಂಡಳಿಯೇ ಮುಂದುವರಿಯಲಿದೆ. ಒಂದು ವೇಳೆ ಆಡಳಿತಾಧಿಕಾರಿ ನೇಮಕವಾಗಿದ್ದರೆ ಅವರೇ ಮುಂದುವರಿಯುತ್ತಾರೆ.

ಲೋಕಸಭೆ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಇನ್ನೊಂದೆಡೆ ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಮಾಡುವಲ್ಲಿ ಪೊಲೀಸ್‌ ಸಿಬ್ಬಂದಿ ನಿರತರಾಗಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳಿಗೆ ಮುಕ್ತವಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲದೇ ಇರುವುದರಿಂದ ಚುನಾವಣೆ ಮುಂದೂಡಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಏ.6ರಂದು ನಡೆಯಬೇಕಿದ್ದ ಡಿಸಿಸಿ ಬ್ಯಾಂಕ್‌ ಚುನಾವಣೆ ಮುಂದೂಡಲ್ಪಟ್ಟಿದೆ.

Kalleshwara-Enterprises.webp

ಇದನ್ನೂ ಓದಿ – ರಿಪ್ಪನ್‌ಪೇಟೆಯಲ್ಲಿ ಸಾಧಾರಣ ಮಳೆ, ಶಿವಮೊಗ್ಗದಲ್ಲಿ ಕವಿದ ಮೋಡ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment