ಬೆಂಗಳೂರು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ (President) ಆರ್.ಎಂ.ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸುಮಾರು 11 ಗಂಟೆ ವಿಚಾರಣೆ ನಡೆಸಿದ್ದಾರೆ. ಮಂಗಳವಾರ ಸಂಜೆ ವೇಳೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.
ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು, ಮಂಗಳವಾರ ಆರ್.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆ ನಡೆಸಿದರು.
ಬೆಳಗ್ಗೆಯಿಂದ ನಿರಂತರ ವಿಚಾರಣೆ

ಆರ್.ಎಂ.ಮಂಜುನಾಥ ಗೌಡ ಅವರು ಚಾಮರಾಜಪೇಟೆಯಲ್ಲಿರುವ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿರುವ ಮಾಹಿತಿ ತಿಳಿದು ಇ.ಡಿ ಅಧಿಕಾರಿಗಳು ಅಲ್ಲಿ ದಾಳಿ ನಡೆಸಿದ್ದರು. ಅಪೆಕ್ಸ್ ಬ್ಯಾಂಕ್ ಕೊಠಡಿಯಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಿದರು. ಸತತ 11 ಗಂಟೆ ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಂಜೆ ವೇಳೆಗೆ ಆರ್.ಎಂ.ಮಂಜುನಾಥ ಗೌಡ ಅವರನ್ನು ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರ ವಿಚಾರಣೆ ಮುಂದುವರೆಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ
ಇದೇ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದರು. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:➤ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್