ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರ್.ಎಂ.ಮಂಜುನಾಥ್‍ಗೌಡ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರೆಯುವ ನೈತಿಕತೆ ಇಲ್ಲ. ಅವರು ರಾಜೀನಾಮೆ ನೀಡಬೇಕು ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚನ್ನವೀರಪ್ಪ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಬಂಗಾರದ ಅಡಮಾನ ಹಗರಣಕ್ಕೆ ಸಂಬಂಧಿಸಿದಂತೆ ಅವರು ಆರೋಪಿಯಾಗಿದ್ದಾರೆ ಎಂದು ಇಲಾಖಾ ವರದಿ ಹೇಳಿದೆ. ಸ್ವ ಹಿತಸಕ್ತಿಗಾಗಿ ಅಧ್ಯಕ್ಷರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರನ್ನು ನಿರ್ದೇಶಕ ಸ್ಥಾನದಿಂದಲೇ ವಜಾಗೊಳಿಸಲಾಗಿತ್ತು. ಈಗ ಹೈಕೋರ್ಟ್‍ಗೆ ಹೋಗಿ ತಾತ್ಕಾಲಿಕವಾಗಿ ತಡೆಯಾಜ್ಞೆ ತಂದಿದ್ದಾರೆ ಅಷ್ಟೆ. ಹಾಗಂತ ಆರೋಪದಿಂದ ಮುಕ್ತವಾಗಿಲ್ಲ ಎಂದು ಆರೋಪಿಸಿದರು.
ಹಗರಣ ಸಂಬಂಧ ತನಿಖೆ ಮುಂದುವರೆಯುತ್ತಿದೆ. ಅವರು ಅಧಿಕಾರದಲ್ಲಿದ್ದರೆ ತನಿಖೆ ದಿಕ್ಕುತಪ್ಪುವ ಸಾಧ್ಯತೆ ಇರುವುದರಿಂದ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಚನ್ನವೀರಪ್ಪ ಆಗ್ರಹಿಸಿದರು.
ಆರ್.ಎಂ.ಮಂಜುನಾಥಗೌಡ ಅವರು ಆಡಳಿತ ಮಂಡಳಿ ಗಮನಕ್ಕೆ ತಾರದೆ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಾಂತರ ರೂ. ಸಾಲ ನೀಡಿದ್ದಾರೆ. ಈ ಬಗ್ಗೆ ನಿರ್ದೇಶಕರು ವಿರೋಧ ವ್ಯಕ್ತಪಡಿಸಿದ್ದರೂ ಕೂಡ ಅವರು ನೀಡಿದ್ದಾರೆ. ಬ್ಯಾಂಕಿನ ಎಷ್ಟೋ ವಿಷಯಗಳು ಸಭೆಯಲ್ಲಿ ಚರ್ಚೆಯಾಗುತ್ತಿದ್ದರೂ ಅದನ್ನು ಅವರು ಮೀಟಿಂಗ್ ಕಡತಕ್ಕೆ ಸೇರಿಸುತ್ತಲೇ ಇರಲಿಲ್ಲ. ನಂತರ ತಮ್ಮ ಪರವಾಗಿ ಇರುವಂತೆ ಬರೆದುಕೊಳ್ಳುತ್ತಿದ್ದರು ಎಂದು ಆರೋಪಿಸಿದರು.
ಜಿಲ್ಲೆಯ ಅನೇಕ ಸಹಕಾರ ಸಂಘಗಳು ಈಗ ನಷ್ಟದಲ್ಲಿವೆ. ಡಿಸಿಸಿ ಬ್ಯಾಂಕಿಗೆ ಬರಬೇಕಾದ ಹಣ ಕೂಡ ಬಂದಿಲ್ಲ. ಸುಮಾರು 26 ಕೋಟಿಗೂ ಹೆಚ್ಚು ಸಾಲ ವಸೂಲಿ ಆಗಿಲ್ಲ. ಅವರು ಕರ್ತವ್ಯ ಲೋಪವೆಸಗಿರುವುದು ಈಗಾಗಲೇ ಮೇಲ್ನೋಟಕ್ಕೆ ಸಾಬೀತಾಗಿದೆ. ಅವರ ಮೇಲಿನ ಆರೋಪ ಕ್ರಿಮಿನಲ್ ಕೋರ್ಟ್‍ನಲ್ಲಿ ಮುಗಿದಿದ್ದರೂ ಕೂಡ ಸಿವಿಲ್ ಕೋರ್ಟ್‍ನಲ್ಲಿ ಬಾಕಿ ಇದೆ. ಈ ಎಲ್ಲಾ ಕಾರಣಗಳಿಂದ ಆರ್.ಎಂ.ಮಂಜುನಾಥಗೌಡರಿಗೆ ಬ್ಯಾಂಕಿನ ಅಧ್ಯಕ್ಷರಾಗಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಿದೇರ್ಶಕರಾದ ಬಿ.ಡಿ.ಭೂಕಾಂತ್, ಶ್ರೀಪಾದ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]