ಶಿವಮೊಗ್ಗದಲ್ಲಿ ಕರ್ಫ್ಯೂ, ನಿಷೇಧಾಜ್ಞೆ, ವರ್ತಕರ ಆಕ್ರೋಶ, ಡಿಸಿ ಕಚೇರಿಯಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020

ಪೊಲೀಸ್ ಇಲಾಖೆ ವೈಫಲ್ಯಕ್ಕೆ ವರ್ತಕರನ್ನು ಬಲಿಪಶು ಮಾಡಲಾಗುತ್ತಿದೆ. ಕರ್ಫ್ಯೂ, ನಿಷೇಧಾಜ್ಞೆಯಿಂದ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಮೊಗ್ಗದ ವರ್ತಕರ ಜೊತೆಗೆ ಡಿಸಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸಭೆ ನಡೆಸಿದರು. ಈ ವೇಳೆ ನಿಷೇಧಾಜ್ಞೆ, ಕರ್ಫ್ಯೂನಿಂದಾಗಿ ವರ್ತಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದರು.

ಯಾರಿಗೂ ತೊಂದರೆ ಆಗುವುದಿಲ್ಲ

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಯಾರಿಗೂ ತೊಂದರೆ ಆಗದಂತೆ ನೋಡಕೊಳ್ಳುವುದು ನಮ್ಮ ಉದ್ದೇಶ. ಅನಿವಾರ್ಯ ಕಾರಣಗಳಿಂದ ನಿಷೇಧಾಜ್ಞೆ, ಕರ್ಫ್ಯೂ ವಿಧಿಸಲಾಗಿದೆ. ಶಾಂತಿ ಕಾಪಾಡಲು ಎಲ್ಲರ ನೆರವು ಅಗತ್ಯ ಎಂದರು.

RELATED NEWS | ಹನ್ನೊಂದು ಗಂಟೆಗೆ ಸೈರನ್ ಶಬ್ದ, ಗಾಂಧಿ ಬಜಾರ್ ಸ್ಥಬ್ಧ, ಕರ್ಫ್ಯೂ ಸಡಿಲದ ಅವಧಿ ಹೇಗಿತ್ತು ಬಜಾರ್ ವಾತಾವರಣ?

ಮೂರು ಠಾಣೆ ವ್ಯಾಪ್ತಿಯಲ್ಲಷ್ಟೆ ಕರ್ಫ್ಯೂ

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಮಾತನಾಡಿ, ಕೋಟೆ, ದೊಡ್ಡಪೇಟೆ, ತುಂಗಾ ನಗರ ಠಾಣೆಗಳ ವ್ಯಾಪ್ತಿಯಲ್ಲಿ ಮಾತ್ರ ಕರ್ಫ್ಯೂ ವಿಧಿಸಲಾಗಿದೆ. ಉಳಿದ ಭಾಗದಲ್ಲಿ ವ್ಯಾಪಾರ, ವಹಿವಾಟಿಗೆ ಯಾವುದೆ ತೊಂದರೆ ಇಲ್ಲ. ವರ್ತಕರು ಸಿಸಿಟಿವಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಎಲ್ಲರಿಗೂ ಅನುಕೂಲ ಎಂದು ಮನವಿ ಮಾಡಿದರು.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ವರ್ತಕರ ಆಗ್ರಹಗಳೇನು?

  • ಕೋವಿಡ್‍ ಲಾಕ್‍ಡೌನ್‍ನಿಂದಾಗಿ ಈಗಾಗಲೇ ವರ್ತಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರಿ ನಷ್ಟವನ್ನು ಅನುಭವಿಸಿದ್ದಾರೆ.
  • ಪೊಲೀಸ್ ಇಲಾಖೆ ವೈಫಲ್ಯದಿಂದಾಗಿ ಶಿವಮೊಗ್ಗದಲ್ಲಿ ಗಲಭೆ ಸಂಭವಿಸಿದ್ದು, ವರ್ತಕರನ್ನು ಬಲಿಪಶು ಮಾಡಲಾಗುತ್ತಿದೆ.
  • ವ್ಯಾಪಾರ, ವಹಿವಾಟಿಗೆ ಯಾವುದೆ ತೊಂದರೆ ಆಗದಂತೆ ಸೂಕ್ತ ರಕ್ಷಣಾ ವ್ಯವಸ್ಥೆ ಕೈಗೊಳ್ಳಬೇಕು.
  • ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಬೇಕು.

VIDEO REPORT

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ್, ಉಪಾಧ್ಯಕ್ಷ ರುದ್ರೇಶ್, ಉದಯ್ ಕುಮಾರ್, ಗೋಪಿನಾಥ್, ಅಶ್ವಥನಾರಾಯಣ ಶೆಟ್ಟಿ ಸೇರಿದಂತೆ ಹಲವರು ಸಭೆಯಲ್ಲಿದ್ದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment