ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಲ್ಲೆಲ್ಲಿ ತೆರಳಲಿದ್ದಾರೆ?

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar) ಅವರು ಜನವರಿ 29ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜ.29ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಹೆಚ್‌.ಎ.ಎಲ್‌ (HAL) ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ಸುಮಾರು 5.30ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‌ ತಲುಪಲಿದ್ದಾರೆ.

DK-Shivakumar-in-Shimoga-JanaDhwani-Rally

DK-Shivakumar-Press-meet-in-Bhadravathi-VISL

ರಾತ್ರಿ 7.30ಕ್ಕೆ ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಜನವರಿ 30ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ಹೆಚ್‌.ಎ.ಎಲ್‌ ವಿಮಾನ ನಿಲ್ದಾಣ ತಲುಪಲಿದ್ದಾರೆ.

Total-Readers-of-Shivamogga-Live

Leave a Comment