ಶಿವಮೊಗ್ಗದಲ್ಲಿ ಡಿ.8ರಂದ ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ | ನಗರದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ – ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಡಿ.8ರಂದು ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ

FATAFAT-NEWS-1SHIMOGA : ಜೆಡಿಎಸ್ ಶಿವಮೊಗ್ಗ ನಗರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ದೀಪಕ್ ಸಿಂಗ್ ಡಿ.8ರಂದು ಜೆಡಿಎಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 11ಕ್ಕೆ ಶುಭಮಂಗಳ ಸಮುದಾಯ ಭವನದಿಂದ ಜೆಡಿಎಸ್‌ ಕಾರ್ಯಕರ್ತರು ಬೈಕ್ ಜಾಥಾದಲ್ಲಿ ಜೆಡಿಎಸ್‌ ಕಾರ್ಯಾಲಯಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯ ಸಂಚಾಲಕ ವೈಎಸ್‌ವಿ ದತ್ತ, ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ್‌, ಶಾಸಕಿ ಶಾರದಾ ಪೂರಾನಾಯ್ಕ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ. ಈ ಕುರಿತು ದೀಪಕ್‌ ಸಿಂಗ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ- ಬೆಂಗಳೂರಿನಿಂದ ಸೋಮಿನಕೊಪ್ಪದ ಮನೆಗೆ ಮರಳಿದ ಮಹಿಳೆ ಕಾದಿತ್ತು ಆಘಾತ

ರಾಜ್ಯಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

FATAFAT-NEWS-2SHIMOGA : ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಡಿ.14ರಂದು ಸಿರಿಧಾನ್ಯ ಪಾಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕೃಷಿ ಇಲಾಖೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಇದರಲ್ಲಿ ಭಾಗವಹಿಸಬಹುದು. ಭಾವಚಿತ್ರದೊಂದಿಗೆ ಸಂಪೂರ್ಣ ವಿಳಾಸ, ತಯಾರಿಸುವ ಖಾದ್ಯ, ಅದಕ್ಕೆ ಬೇಕಾದ ಸಾಮಗ್ರಿ, ಸಮಯ, ತಯಾರಿಸುವ ವಿಧಾನದ ಮಾಹಿತಿಯೊಂದಿಗೆ ಡಿ.13ರೊಳಗೆ dagrshi@rediffmail.com ಗೆ ಮೇಲ್ ಕಳಿಸಬೇಕು. ಖುದ್ದಾಗಿ ಇಲ್ಲವೇ ಅಂಚೆ ಮೂಲಕ ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕರ ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 8277932643 ಸಂಪರ್ಕಿಸಬಹುದು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment