ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ನವದೆಹಲಿ: ಶಿವಮೊಗ್ಗ ಜಿಲ್ಲೆಯ ರೈಲ್ವೆ (shimoga railway) ಯೋಜನೆಗಳು ಕುರಿತು ಲೋಕಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚರ್ಚೆ ನಡೆಸಿದರು. ರೈಲ್ವೆ ಕುರಿತು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಕೋಟೆಗಂಗೂರು ಟರ್ಮಿನಲ್ ಅಭಿವೃದ್ಧಿ ಹಾಗೂ ಹೊಸ ರೈಲು ಮಾರ್ಗಗಳ ಕುರಿತು ಅವರು ರೈಲ್ವೆ ಸಚಿವರ ಗಮನ ಸೆಳೆದರು.

ಪ್ರಮುಖ ರೈಲ್ವೆ ಯೋಜನೆಗಳ ಬೇಡಿಕೆ

  • ಶಿಕಾರಿಪುರ-ರಾಣೆಬೆನ್ನೂರು: ಶಿವಮೊಗ್ಗ-ಶಿಕಾರಿಪುರ ಮಾರ್ಗ ಪ್ರಗತಿಯಲ್ಲಿದ್ದು, ಮುಂದಿನ ಹಂತವಾದ ಶಿಕಾರಿಪುರ ಮತ್ತು ರಾಣೆಬೆನ್ನೂರು ನಡುವಿನ ಮಾರ್ಗ ನಿರ್ಮಾಣಕ್ಕೆ ಕೂಡಲೇ ಟೆಂಡರ್ ಕರೆಯಬೇಕು.
  • ಬೀರೂರು-ಶಿವಮೊಗ್ಗ ದ್ವಿಪಥ: ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ವೇಗದ ಸಂಚಾರಕ್ಕಾಗಿ 63 ಕಿ.ಮೀ. ಉದ್ದದ ಈ ದ್ವಿಪಥ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಬೇಕು.
  • ಸೊರಬಕ್ಕೆ ರೈಲ್ವೆ ಸಂಪರ್ಕ: ತಾಳಗುಪ್ಪ-ಸಿದ್ದಾಪುರ-ಶಿರಸಿ-ಹುಬ್ಬಳ್ಳಿ ಮಾರ್ಗವನ್ನು ಸೊರಬದ ಮೂಲಕವೇ ಹಾದುಹೋಗುವಂತೆ ಮಾಡಬೇಕು. ಇದರಿಂದ ಅರಣ್ಯ ನಾಶ ತಡೆಗಟ್ಟುವ ಜೊತೆಗೆ ಸೊರಬದ ಜನತೆಯ ದಶಕಗಳ ಬೇಡಿಕೆ ಈಡೇರಲಿದೆ.
  • ತೀರ್ಥಹಳ್ಳಿ ಸಂಪರ್ಕ: ಕುವೆಂಪು ಜನ್ಮಭೂಮಿ ತೀರ್ಥಹಳ್ಳಿಗೆ ರೈಲು ಸಂಪರ್ಕ ಕಲ್ಪಿಸಲು ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಹಾಗೂ ಚಿಕ್ಕಮಗಳೂರು ಮಾರ್ಗದ ಸಮೀಕ್ಷೆಯನ್ನು ವೇಗಗೊಳಿಸಬೇಕು.
MP-BY-Raghavendra-Speaks-in-Loksabha-about-Shimoga-Railway-projects

ಕೋಟೆಗಂಗೂರು ಟರ್ಮಿನಲ್, ವಂದೇ ಭಾರತ್

ಶಿವಮೊಗ್ಗ ಹೊರವಲಯದ ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನ 2ನೇ ಹಂತದ ಕಾಮಗಾರಿಗೆ ತಕ್ಷಣ ಅನುಮೋದನೆ ನೀಡಬೇಕು. ಅಲ್ಲಿ ಎರಡನೇ ಪೂರ್ಣ ಪ್ರಮಾಣದ ಪಿಟ್‌ ಲೈನ್ ಹಾಗೂ ಸ್ವಯಂಚಾಲಿತ ಕೋಚ್ ವಾಷಿಂಗ್ ಪ್ಲಾಂಟ್ ಸ್ಥಾಪಿಸಬೇಕು. ಶಿವಮೊಗ್ಗದಿಂದ ವಂದೇ ಭಾರತ್ ರೈಲುಗಳ ಕಾರ್ಯಾಚರಣೆ ಆರಂಭಿಸಲು ಈ ಟರ್ಮಿನಲ್ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ – ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ ಸಂಕಲ್ಪಕ್ಕೆ ಪೂರಕವಾಗಿ ಶಿವಮೊಗ್ಗ ಜಿಲ್ಲೆಯು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಸಂಸದರು ವಿಶ್ವಾಸ ವ್ಯಕ್ತಪಡಿಸಿದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 17, 2026

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment