ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MARCH 2021
ದೇವಾಂಗ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಇವತ್ತು ಸಮುದಾಯದವರು ಉರುಳು ಸೇವೆ ಮಾಡಿದರು.
ಶಿವಮೂರ್ತಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ನಡೆಸಲಾಯಿತು. ದೇವಾಂಗ ಎಸ್ಸಿ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಉರುಳು ಸೇವೆ ಆಯೋಜಿಸಲಾಗಿತ್ತು.
ರಾಜ್ಯದಲ್ಲಿ ಸುಮಾರು 40 ಲಕ್ಷ ಮಂದಿ ದೇವಾಂಗ ಸಮಾಜದವರಿದ್ದಾರೆ. ಈಗ ಪ್ರವರ್ಗ 2ಎ ಅಡಿಯಲ್ಲಿ ದೇವಾಂಗ ಸಮುದಾಯವಿದೆ. ಇದರಿಂದ ಸಮುದಾಯದವರಿಗೆ ಯಾವುದೆ ಅನುಕೂಲವಾಗಿಲ್ಲ. ಆದ್ದರಿಂದ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆಯಿಂದ ಬಂದಿದ್ದ ಸಮುದಾಯದವರು, ಹೋರಾಟದಲ್ಲಿ ಪಾಲ್ಗೊಂಡಿದ್ದರು. ಈಗಲೇ ಸರ್ಕಾರ ಈ ಬಗ್ಗೆ ಗಮನ ಹರಿಸದೆ ಇದ್ದರೆ ಮಾರ್ಚ್ 28ರಂದು ವಿಧಾನಸೌಧ ಚಲೋ ಮಾಡಲಾಗುತ್ತದೆ ಎಂದು ಸಮಾಜದ ಮುಖಂಡ ಈಸೂರು ಬಸವರಾಜು ತಿಳಿಸಿದರು.


ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















