SHIVAMOGGA LIVE NEWS | 23 NOVEMBER 2023
SHIMOGA : ಧೀರ ದೀವರ ಬಳಗದಿಂದ ನ.26ರಂದು ನಗರದ ಈಡಿಗ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಹ ಸಂಚಾಲಕ ಸುರೇಶ್. ಕೆ.ಬಾಳೆಗುಂಡಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ಕ್ಕೆ ಸಾರಗನಜೆಡ್ಡು ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತ ಹಾಗೂ ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ. ದೀವರ ಸಾಂಸ್ಕೃತಿಕ ವೈಭವದ ಸಂಚಾಲಕ ನಾಗರಾಜ್ ನೇರಿಗೆ ಉಪಸ್ಥಿತರಿರಲಿದ್ದಾರೆ ಎಂದರು.
ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭವಿರಲಿದೆ. ಹಸೆ ಚಿತ್ತಾರ ಕಲಾವಿದ ಸಿರಿವಂತೆ ಚಂದ್ರಶೇಖರ್ ಸಮಾರೋಪ ನುಡಿ ಆಡಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಧೀರ ದೀವರು ಹಾಗೂ ರಾಜ್ಯಮಟ್ಟದ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ಟಿ ನಾಯ್ಕ್, ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಲಿದ್ದಾರೆ ಎಂದರು.
ಸಿಗಂದೂರು ಧರ್ಮದರ್ಶಿಗೆ ಪ್ರಶಸ್ತಿ
ಈ ಬಾರಿ ಧೀರ ದೀವರು ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಡಾ.ಎಸ್.ರಾಮಪ್ಪ, ಹಿರಿಯ ಹಸೆ ಚಿತ್ತಾರ ಕಲಾವಿದೆ ಲಕ್ಷ್ಮಮ್ಮ ಗಡೇಮನೆ, ಅಂತರಾಷ್ಟ್ರೀಯ ಜಾನಪದ ಡೊಳ್ಳು ಕಲಾವಿದ ಬಿ.ಟಾಕಪ್ಪ ಕಣ್ಣೂರು ಅವರಿಗೆ ಪ್ರದಾನ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪುನೀತ್ ಹೆಬ್ಬೂರು, ಕೃಷ್ಣಮೂರ್ತಿ, ಕಲಗೋಡು ಕಾಮಕೃಷ್ಣ, ಜಯದೇವಪ್ಪ, ಲಕ್ಷ್ಮಿಕಾಂತ್ ಚಿಮಣೂರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200