ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್‌ ನ್ಯೂಸ್‌ ನೀಡಿದ ಡಿಜಿಸಿಎ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 24 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಲೈಸೆನ್ಸ್‌ ಅವಧಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಒಂದು ವರ್ಷಕ್ಕೆ ವಿಸ್ತರಿಸಿದೆ. ಈ ಹಿಂದಿನ ಲೈಸೆನ್ಸ್‌ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಿದೆ.

ಲೈಸೆನ್ಸ್‌ ಅವಧಿ ವಿಸ್ತರಣೆ ಅಗಿರುವ ಕುರಿತು ಡಿಜಿಸಿಎ ಅಧಿಕಾರಿಗಳು ಶಿವಮೊಗ್ಗ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಂಗಳವಾರ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ. ಈಗ 2025ರ ಅಕ್ಟೋಬರ್‌ 23ರವರೆಗೆ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ ಅವಧಿ ವಿಸ್ತರಣೆ ಆಗಿದೆ.

Star-Airline-Flight-from-hyderabad-in-Shimoga

ಒಂದೊಂದೇ ತಿಂಗಳು ವಿಸ್ತರಣೆಯಾಗುತ್ತಿತ್ತು

» 2023ರ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. 2024ರ ಆಗಸ್ಟ್‌ 23ರವರೆಗೆ ವಿಮಾನ ನಿಲ್ದಾಣಕ್ಕೆ ಲೈಸೆನ್ಸ್‌ ಇತ್ತು.

First Flight - Indigo ATR 72 Flight in Shimoga Airport

» ಅವಧಿ ಪೂರ್ಣಗೊಳ್ಳುತ್ತಿದ್ದ ಹಿನ್ನೆಲೆ ಲೈಸೆನ್ಸ್‌ ನವೀಕರಣಕ್ಕೆ ಡಿಜಿಸಿಎಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆ ಲೈಸೆನ್ಸ್‌ ಅವಧಿಯನ್ನು ಕೇವಲ ಒಂದು ತಿಂಗಳಿಗೆ ವಿಸ್ತರಿಸಲಾಗಿತ್ತು. 2024ರ ಸೆಪ್ಟೆಂಬರ್‌ 23ಕ್ಕೆ ಒಂದು ತಿಂಗಳು ಅವಧಿ ಪೂರ್ಣಗೊಂಡಿತ್ತು.

Shimoga-Airport-Terminal-Building-Sogane

ಇದನ್ನೂ ಓದಿ » ದಾಖಲೆ ನಿರ್ಮಿಸಿದ ಶಿವಮೊಗ್ಗ ವಿಮಾನ ನಿಲ್ದಾಣ, ಏನದು?

» ಸುರಕ್ಷತೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಹಿನ್ನೆಲೆ ವಿಮಾನ ನಿಲ್ದಾಣದ ನಿರ್ವಹಣೆ ಮಾಡುತ್ತಿರುವ ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) 20 ಲಕ್ಷ ರೂ. ದಂಡ ವಿಧಿಸಿ, ಪುನಃ ಒಂದು ತಿಂಗಳು ಮಾತ್ರ ಲೈಸೆನ್ಸ್‌ ಅವಧಿ ವಿಸ್ತರಣೆ ಮಾಡಲಾಗಿತ್ತು. ಈ ಅವಧಿ 2024ರ ಅಕ್ಟೋಬರ್‌ 23ಕ್ಕೆ ಮುಕ್ತಾಯವಾಗುತ್ತಿತ್ತು.

ಇದನ್ನೂ ಓದಿ » ಶಿವಮೊಗ್ಗದಿಂದ ಯಾವೆಲ್ಲ ವಿಮಾನ ಎಷ್ಟೊತ್ತಿಗೆ ಹೊರಡುತ್ತವೆ? ಇಲ್ಲಿದೆ ಟೈಮ್‌ ಟೇಬಲ್‌

» ಎರಡು ಬಾರಿ ಒಂದೊಂದು ತಿಂಗಳು ಮಾತ್ರ ಲೈಸೆನ್ಸ್‌ ಅವಧಿ ವಿಸ್ತರಣೆ ಮಾಡಿದ್ದ ಡಿಜಿಸಿಎ, ತನ್ನ ಸೂಚನೆಗಳನ್ನು ಪಾಲಿಸಿದ ಹಿನ್ನೆಲೆ ಒಂದು ವರ್ಷದ ಅವಧಿಗೆ ಲೈಸೆನ್ಸ್‌ ನವೀಕರಣ ಮಾಡಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment