ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರಿಗೆ ಶಿವಮೊಗ್ಗದ ಜೊತೆಗೆ ಉತ್ತಮ ನಂಟಿತ್ತು. ಪಕ್ಕದ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದರಿಂದ, ಶಿವಮೊಗ್ಗದ ಜೊತೆ, ಶಿವಮೊಗ್ಗದವರ ಜೊತೆಗೆ ಒಳ್ಳೆಯ ಬಾಂಧವ್ಯ ಇತ್ತು.
ಶಿವಮೊಗ್ಗದಲ್ಲೂ ಅಭಿಮಾನಿಗಳು, ಹಿತೈಷಿಗಳು
ಧರ್ಮೇಗೌಡ ಅವರಿಗೆ ಶಿವಮೊಗ್ಗದಲ್ಲಿ ಹಿತೈಷಿಗಳಿದ್ದಾರೆ, ಅಭಿಮಾನಿಗಳು ಇದ್ದಾರೆ. ಇವತ್ತು ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದಾರೆ.
ಒಂದು ತಿಂಗಳ ಹಿಂದೆ ಶಿವಮೊಗ್ಗದಲ್ಲಿದ್ದರು
ಸರಿಯಾಗಿ ಒಂದು ತಿಂಗಳ ಹಿಂದೆ ಎಸ್.ಎಲ್.ಧರ್ಮೇಗೌಡ ಅವರು ಶಿವಮೊಗ್ಗದಲ್ಲಿದ್ದರು. ಸಹ್ಯಾದ್ರಿ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನವೆಂಬರ್ 29ರಂದು ಆ ಕಾರ್ಯಕ್ರಮ ನಡೆದಿತ್ತು. ದುರಂತವೆಂದರೆ ಡಿಸೆಂಬರ್ 29ರಂದು ಶಿವಮೊಗ್ಗದಲ್ಲಿ ಧರ್ಮೇಗೌಡ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಏನೆಲ್ಲ ಮಾತಾಡಿದ್ದರು ಧರ್ಮೇಗೌಡರು?
ಸಹ್ಯಾದ್ರಿ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಸ್.ಎಲ್.ಧರ್ಮೇಗೌಡ ಅವರು, ಸಹ್ಯಾದ್ರಿ ಕಾಲೇಜು ಇತಿಹಾಸವನ್ನು ಸ್ಮರಿಸಿದ್ದರು. ಮಲೆನಾಡು ಭಾಗದಲ್ಲಿ ಶೈಕ್ಷಣಿಕ ಬೆಳವಣಿಗೆ ಕುರಿತು ಮಾತನಾಡಿದ್ದರು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆ, ಪರಿವರ್ತನೆ ಕುರಿತು ಚರ್ಚಿಸಿದ್ದರು.



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






