ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020
ಶಾಂತಿನಗರ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಾಲಿಕೆ ವಿರೋಧಪಕ್ಷದ ನಾಯಕ ಹೆಚ್.ಸಿ. ಯೋಗೀಶ್ ನೇತೃತ್ವದಲ್ಲಿ ಹಸುವಿಗೆ ಸ್ನಾನ ಮಾಡಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
೩ ಮತ್ತು ೪ ವಾರ್ಡ್‌ಗೆ ಶಾಂತಿ ನಗರ ಮುಖ್ಯರಸ್ತೆಯೇ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಸವಳಂಗ ಹಾಗೂ ಹೊನ್ನಾಳಿ ರಸ್ತೆಯನ್ನು ಸೇರಿಸುವ ಬೈಪಾಸ್ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು, ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಜನ ಮತ್ತು ವಾಹನ ಸಂಚಾರ ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಾಂತಿನಗರದ ಸುತ್ತಮುತ್ತ ಸುಮಾರು ಸಾವಿರಾರು ಮನೆಗಳಿವೆ. ಜನ ಸಂಖ್ಯೆಯು ಹೆಚ್ಚಿದೆ. ಅಲ್ಲದೆ ಈ ನಗರ ಕೊಳಚೆ ಪ್ರದೇಶಕ್ಕೆ ಸೇರಿದೆ. ಹಾಗಾಗಿ ಇಲ್ಲಿ ರಸ್ತೆ ಇಕ್ಕಟ್ಟಿನಿಂದ ಮತ್ತು ಗುಂಡಿಗಳಿಂದ ತುಂಬಿಹೋಗಿದ್ದು, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಲೇ ಇದೆ. ಕೂಡಲೇ ರಸ್ತೆಯನ್ನು ಸರಿಪಡಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






