ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021
ಕ್ವಾರಿಗಳು, ಕ್ರಷರ್ಗಳನ್ನು ಬಂದ್ ಮಾಡಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಈ ನಡುವೆ, ಕಲ್ಲಗಂಗೂರು ಕ್ವಾರಿ ಸ್ಪೋಟ ಪ್ರಕರಣದಲ್ಲಿ, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗಳು ಗ್ರಾಮಸ್ಥರಲ್ಲಿ ಗೊಂದಲ ಹೆಚ್ಚಿಸಿದೆ.
![]() |
ಕ್ವಾರಿ ಅಕ್ರಮವೋ? ಸಕ್ರಮವೋ?
ಸ್ಪೋಟದ ಸ್ಥಳಕ್ಕೆ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇಲ್ಲ. ಇದು ಪರಿಸರ ಸೂಕ್ಷ್ಮ ವಲಯ. ಕ್ರಷರ್ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಇನ್ನು, ಶುಕ್ರವಾರ ಬೆಳಗ್ಗೆ ಕಲ್ಲಗಂಗೂರಿನ ಕ್ವಾರಿಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಇಲ್ಲಿ ನಡೆಯುತ್ತಿರುವ ಕಲ್ಲು ಕ್ವಾರಿ ಅಕ್ರಮವಲ್ಲ, ಸಕ್ರಮ. ಆದರೆ ಇದು ಅಕ್ರಮವೋ, ಸಕ್ರಮವೋ ಪ್ರಶ್ನೆ ಬೇರೆ. ಸ್ಪೋಟ ಆಗಬೇಕಾ ಎಂದು ಪ್ರಶ್ನಿಸಿದ್ದರು. ಈ ಕುರಿತು ನ್ಯೂಸ್ ಚಾನೆಲ್ನಲ್ಲಿ ಪ್ರಕಟವಾಗಿರುವ ವರದಿಯ ವಿಡಿಯೋ ಇಲ್ಲಿದೆ.
ಸಿಎಂ ಮತ್ತು ಸಚಿವರ ಹೇಳಿಕೆಯಲ್ಲಿನ ಭಿನ್ನತೆ ಜನರನ್ನು ಗೊಂದಲಕ್ಕೀಡು ಮಾಡಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200