ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 AUGUST 2023
SHIMOGA : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ (Nandini Sweets) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ಸ್ವಾತಂತ್ರ್ಯೋತ್ಸವ, ವಿವಿಧೆಡೆ ಡಿಫರೆಂಟ್ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಇವತ್ತು ಶಿಮುಲ್ ಅಧ್ಯಕ್ಷ ಶ್ರೀಪಾದ ರಾವ್ ಅವರು ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದರು. ಶಿಮುಲ್ ನಿರ್ದೇಶಕ ಡಿ.ಆನಂದ್, ದಿನೇಶ್, ಎಂಡಿ ಶೇಖರ್ ಮತ್ತು ಸಿಬ್ಬಂದಿ ಹಾಜರಿದ್ದರು.
ಏನಿದು ಸಿಹಿ ಉತ್ಸವ?
ಶಿಮುಲ್ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಾಲಿನಿಂದ ತಯಾರಿಸಿದ ಸಿಹಿ ಉತ್ಪನ್ನಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ನಂದಿನಿ ಸಿಹಿ (Nandini Sweets) ಉತ್ಸವ ಆಯೋಜಿಸಲಾಗಿದೆ. ರಾಜ್ಯ ಸಹಕಾರ ಹಾಲು ಮಹಾಮಂಡಳದ ಸಹಯೋಗದೊಂದಿಗೆ ಪ್ರತಿ ವರ್ಷ ಈ ಉತ್ಸವ ಹಮ್ಮಿಕೊಳ್ಳಲಾಗುತ್ತದೆ. ಉತ್ಸವದ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳ ದರದ ಮೇಲೆ ಶೇ.20ರಷ್ಟು ರಿಯಾಯಿತಿ ದೊರೆಯಲಿದೆ.