ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 MAY 2023
SHIMOGA : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ (Dr Ambedkar) ಅವರ ನಾಮಫಲಕವನ್ನು ಚರಂಡಿಗೆ ಹೊದಿಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್, ಡಾ. ಬಿ.ಆರ್.ಅಂಬೇಡ್ಕರ್ (Dr Ambedkar) ಅವರಿಗೆ ಅವಮಾನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಜೈಲ್ ಸರ್ಕಲ್‌ನಲ್ಲಿ ಪೊಲೀಸ್ ಚೌಕಿ ಪಕ್ಕದಲ್ಲಿ ಅಂಬೇಡ್ಕರ್ ಅವರ ಹೆಸರಿನ ಫಲಕವನ್ನು ಚರಂಡಿಗೆ ಮುಚ್ಚಲಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಜೈಲ್ ವೃತ್ತದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅಪೂರ್ಣವಾಗಿರುವುದು, ಚರಂಡಿಗೆ ಸ್ಲಾಬ್ ಹಾಕುವ ಬದಲು ಡಾ. ಅಂಬೇಡ್ಕರ್ ವೃತ್ತ ಎಂದು ಬರೆದಿರುವ ನಾಮಫಲಕವನ್ನೇ ಸ್ಲಾಬ್ ರೀತಿ ಅಳವಡಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಮಂಗಳವಾರ ವರದಿ ಮಾಡಿದೆ. ಅಧಿಕಾರಿಗಳ ಅಸಡ್ಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ – ಜೈಲ್ ಸರ್ಕಲ್‌ನಲ್ಲಿ ಸ್ವಲ್ಪ ಯಾಮಾರಿದ್ರು ಬೈಕ್ ಸವಾರರಿಗೆ ಅಪಾಯ ಫಿಕ್ಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422