ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಇನ್ಮುಂದೆ ಕರೋನ ಪಾಸಿಟಿವ್ ಬಂದವರು ಮನೆಗೆ ಹೋಗುವಂತಿಲ್ಲ. ಖಾಸಗಿ ವಾಹನಗಳಲ್ಲಿ ಓಡಾಡುವಂತಿಲ್ಲ. ಮನೆ ಬಿಟ್ಟು ಹೊರ ಬರುವಂತಿಲ್ಲ.
ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಪೊಲೀಸ್ ತಪಾಸಣೆ ವೇಳೆ ಸೋಂಕಿತರು ಪತ್ತೆಯಾಗಿ, ದಂಗುಬಡಿಸಿದ್ದರು. ಈ ಪ್ರಕರಣಗಳನ್ನು ಗಂಭೀರವಾಗಿ ಸ್ವೀಕರಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಕೆಲವು ಕಠಿಣ ನಿರ್ಧಾರ ಕೈಗೊಂಡಿದೆ.
ಏನದು ಕಠಿಣ ಕ್ರಮಗಳು?
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕರೋನ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸೋಂಕಿತರು ಸುಖಾಸುಮ್ಮನೆ ಹೊರಗೆ ತಿರುಗಾಡುತ್ತಿದ್ದು, ಅಂಥವರ ವಿರುದ್ಧ ನಿಗಾ ವಹಿಸಬೇಕು. ಸುಮ್ಮನೆ ಹೊರಗೆ ಸುತ್ತಾಡುತ್ತಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಆಗಿಂದಾಗ್ಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಸೋಂಕಿತರಲ್ಲಿ ಅನಾಥ ಪ್ರಜ್ಞೆ ಮೂಡದಂತೆ ನೋಡಿಕೊಳ್ಳಬೇಕು ಎಂದರು.
ಹೊಸ ಪ್ಲಾನ್ ಮಾಡಿದ ಜಿಲ್ಲಾಡಳಿತ
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಜಿಲ್ಲಾಡಳಿತದ ಹೊಸ ಪ್ಲಾನ್ ಕುರಿತು ತಿಳಿಸಿದರು.
ಕರೋನ ಪಾಸಿಟಿವ್ ಬಂದ ವ್ಯಕ್ತಿ ಖಾಸಗಿ ವಾಹನಗಳಲ್ಲಿ ಹೋಗುವಂತಿಲ್ಲ. ಒಂದು ವೇಳೆ ಖಾಸಗಿ ವಾಹನ ಬಳಕೆ ಮಾಡಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ.
ಪಾಸಿಟಿವ್ ಎಂದು ವರದಿ ಬಂದ ತಕ್ಷಣ ಆಂಬುಲೆನ್ಸ್‍ನಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲಾಗುತ್ತದೆ. ಮೂರು ದಿನ ಅಲ್ಲಿರಬೇಕು. ಆರೋಗ್ಯ ಪರಿಶೀಲನೆ ಬಳಿಕ ಸುಧಾರಣೆ ಕಂಡು ಬಂದರೆ ಹೋಂ ಐಸೊಲೇಷನ್‍ಗೆ ಕಳುಹಿಸಲಾಗುತ್ತದೆ. ಇಲ್ಲದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ.
ಗಂಭೀರ ಸ್ಥಿತಿಯಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ತಾಲೂಕು ಕೇಂದ್ರದಲ್ಲಿ ಐಸಿಯು ಬೆಡ್ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ಕೇಂದ್ರದ ಮೇಲೆ ಒತ್ತಡ ಕಡಿಮೆ ಮಾಡಲು ಚಿಂತನೆ ನಡೆಸಲಾಗಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422