ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿಯಿಂದ ಸೋಮಿನಕೊಪ್ಪ ಆಲದಹಳ್ಳಿ ಗ್ರಾಮದಲ್ಲಿ ಮಾ.21ರಂದು ಜಿಲ್ಲಾ ಮಟ್ಟದ 7ನೇ ಜಾನಪದ ಸಮ್ಮೇಳನ (Folk Conference) ಏರ್ಪಡಿಸಿದ್ದು, ಆಹೋರಾತ್ರಿ ಸಮ್ಮೇಳನ ನಡೆಯಲಿದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಾನಪದ ಗಾಯಕ ಕೆ.ಯುವರಾಜ್ ಆಯ್ಕೆಯಾಗಿದ್ದಾರೆ. ಜಾನಪದ ಸಮ್ಮೇಳನದಲ್ಲಿ 22 ಕಲಾ ತಂಡಗಳು ಭಾಗವಹಿಸಲಿವೆ. ಸೋಮಿನಕೊಪ್ಪದ ಪ್ರವೇಶದ್ವಾರದಿಂದ ನಡೆಯುವ ಸಮ್ಮೇಳನ ಸರ್ವಾಧ್ಯಕ್ಷ ಕೆ. ಯುವರಾಜ್ ಅವರನ್ನು ಒಳಗೊಂಡ ಜಾನಪದ ನಡಿಗೆಗೆ ಶಾಸಕಿ ಶಾರದಾ ಪೂರ್ಯ ನಾಯ್ಕ ಚಾಲನೆ ನೀಡಲಿದ್ದಾರೆ ಎಂದರು.

D-Manjunatha-about-kannada-shahitya-sammelana

ಸಂಜೆ 5ಕ್ಕೆ ಸೋಮಿನಕೊಪ್ಪದ ಶ್ರೀ ರಾಮಾಂಜನೇಯ ದೇವಸ್ಥಾನದ ಎದುರು ನಿರ್ಮಿಸಿರುವ ವೇದಿಕೆಯಲ್ಲಿ ಸಂಸದ ಬಿ. ವೈ.ರಾಘವೇಂದ್ರ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಹಿ.ಚಿ.ಬೋರಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಆಶಯ ನುಡಿ ಆಡಲಿದ್ದಾರೆ ಎಂದು ತಿಳಿಸಿದರು.

ಮಲೆನಾಡಿನ ದೀವರ ಸಂಸ್ಕೃತಿಯ ಅನಾವರಣದ ಹಸೆ ಚಿತ್ತಾರ ಪುಸ್ತಕವನ್ನು ಬೆಂಗಳೂರಿನ ಗೀತಾ ಭಟ್ ಬಿಡುಗಡೆ ಮಾಡಲಿದ್ದಾರೆ. ಜಾನಪದ ತಜ್ಞ ಡಾ. ಅಪ್ಪಗೆರೆ ತಿಮ್ಮರಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಣ್ಣೂರು ಟಾಕಪ್ಪ, ಕಾಂತರಾಜ್ ಸೋಮಿನಕೊಪ್ಪ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ – ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಜನಪದ ಗೀತೆಗಳ ಗಾಯನ, ಸೋಬಾನೆ, ಕುಟ್ಟುವ, ಬೀಸುವ, ಲಾವಣಿ, ಚೌಡಿಕೆ ಪದ, ದೇವಿ ಕುಣಿತ, ತತ್ವಪದ, ಸುಗ್ಗಿ ಕುಣಿತ, ಜೋಗಿಪದ, ಗೀಗಿಪದ, ಡೊಳ್ಳು ಕುಣಿತ, ಪುರವಂತಿಕೆ, ಜೋಗತಿ ನೃತ್ಯ, ಪೂಜಾ ಕುಣಿತ, ಅಂಟಿಗೆ ಪಂಟಿಗೆ, ತಮಟೆ ಮೇಳ, ಕಂಸಾಳೆ, ಕರ್ಪಾಳ ಮೇಳ, ಜನಪದ ಗೀತೆ, ಕೋಲಾಟ, ಲಂಬಾಣಿ ನೃತ್ಯ ಕಾರ್ಯಕ್ರಮ ನಡೆಯಲಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂತರಾಜ್ ಸೋಮಿನಕೊಪ್ಪ, ಕೃಷ್ಣಮೂರ್ತಿ ಹಿಳ್ಳೋಡಿ, ಡಿ. ಗಣೇಶ್, ಪರಶುರಾಮ ಮಟ್ಟೇರ, ಬಾಲರಾಜ್ ಚುರ್ಚುಗುಂಡಿ, ಡಾ.ಕೃಷ್ಣಮೂರ್ತಿ ಆಚಾರ್, ಭಾಗ್ಯಲಕ್ಷ್ಮಿ ಇದ್ದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2026

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment