ಶಿವಮೊಗ್ಗ LIVE
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (Journalists Association) ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.20ರ ಬೆಳಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನೂತನ ಜಿಲ್ಲಾಧ್ಯಕ್ಷ ಹೆಚ್.ಯು.ವೈದ್ಯನಾಥ್, ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಅಧ್ಯಕ್ಷ ಟಿ.ವಿ.ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಹೆಚ್ ಬಿ. ಮದನಗೌಡ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ.ಲೋಕೇಶ್‌ರವರು ಪ್ರಮಾಣವಚನ ಬೋಧಿಸಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಹಾಸನ ಘಟಕದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?
ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, ಸಾವು
ನಿರ್ಗಮಿತ ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್, ಉಪಾಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ಸುದ್ದಿಗೊಷ್ಠಿಯಲ್ಲಿದ್ದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





