ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಐಟಿ, ಬ್ಯಾಂಕಿಂಗ್‌ ಸೇರಿ ವಿವಿಧ ಕಂಪನಿಗಳು ಭಾಗಿ, ಯಾವಾಗ? ಎಲ್ಲಿ?

ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು (Job Fair) ಫೆಬ್ರವರಿ 27 ರಂದು ನಗರದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ATNCC (ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು) ಆವರಣದಲ್ಲಿ ಈ ಮೇಳ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್‌ ತಿಳಿಸಿದರು. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್.ಹೇಮಂತ್‌, ಉದ್ಯೋಗ ಮೇಳದಲ್ಲಿ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ ತೇರ್ಗಡೆ ಅಥವಾ ಅನುತ್ತೀರ್ಣರಾದವರು, ಪಿಯುಸಿ, ಡಿಪ್ಲೊಮಾ, ಬಿ.ಇ ಹಾಗೂ ಯಾವುದೇ ಪದವಿ ಮತ್ತು ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ZP-CEO-Hemanth-Kumar-about-Job-Fair-in-Shimoga.

ZP-CEO-Hemanth-Kumar-about-Job-Fair-in-Shimoga.

ಐಟಿ, ಕಂಪ್ಯೂಟರ್, ಆಟೋ ಮೊಬೈಲ್, ಮ್ಯಾನುಫ್ಯಾಕ್ಚರಿಂಗ್, ನರ್ಸಿಂಗ್, ಬ್ಯಾಂಕಿಂಗ್ ಹಾಗೂ ಇನ್ಶೂರೆನ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ. ಅಭ್ಯರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕಂಪನಿಗಳಲ್ಲಿ ಕೆಲಸ ಪಡೆಯಲು ಈ ಮೇಳವು ಉತ್ತಮ ವೇದಿಕೆಯಾಗಿದ್ದು, ಮೇಳಕ್ಕೆ ಪ್ರವೇಶ ಉಚಿತವಾಗಿದೆ. ವಿಶೇಷವಾಗಿ ಯುವತಿಯರಿಗೆ ಈ ಮೇಳದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ಸೇರಿದಂತೆ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಇದ್ದರು.

ಇದನ್ನೂ ಓದಿ – ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಚಾಲನೆ, ದರ್ಶನಕ್ಕೆ ಕಿಲೋ ಮೀಟರ್‌ಗಟ್ಟಲೆ ಕ್ಯೂ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ, ಫಲಾನುಭವಿಗಳಿಗೆ ಮಹತ್ವದ ಸಲಹೆ, ಏನದು?