ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ (Sports) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನೆಹರು ಕ್ರೀಡಾಂಗಣದಲ್ಲಿ ಶಾಟ್ಪುಟ್ ಗುಂಡು ಎಸೆದು ಸಚಿವ ಮಧು ಬಂಗಾರಪ್ಪ ಕ್ರೀಡಾಕೂಟ ಉದ್ಘಾಟಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎರಡು ದಿನದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿದೆ.
ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ ಜಿಲ್ಲೆ ಕ್ರೀಡೆ ಮತ್ತು ಸಂಸ್ಕೃತಿಗೆ ಹೆಸರಾಗಿದೆ. ಈ ಹಿಂದೆ ಇಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿತ್ತು. ಆಗ ಎಸ್.ಎಂ.ಕೃಷ್ಣ ಸರ್ಕಾರ ಕೇವಲ 5 ಲಕ್ಷ ರೂ. ಅನುದಾನ ನೀಡಿತ್ತು. ಆದರೆ ಕ್ರೀಡಾಕೂಟ ನಡೆಸಲು ಇಷ್ಟು ಹಣ ಸಾಕಾಗುವುದಿಲ್ಲ ಎಂದು ಎಸ್.ಬಂಗಾರಪ್ಪ ಅವರು ಕ್ರೀಡಾಂಗಣಕ್ಕೆ ಬಂದು ಕುಳಿತರು. ಸುಮಾರು 70 ಲಕ್ಷ ರೂ. ಹಣ ಸಂಗ್ರಹವಾಯಿತು. ಇದರಿಂದ ಅದ್ಧೂರಿಯಾಗಿ ಕ್ರೀಡಾಕೂಟ ನಡೆಸಲಾಗಿತ್ತು.
– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಕ್ರೀಡಾಕೂಟವು ಸರ್ಕಾರಿ ನೌಕರರಿಗೆ ಉತ್ಸಾಹ ತುಂಬಲಿದೆ. ನಾನು ಕೂಡ ಕ್ರೀಡಾಪಟು. ಈ ಹಿಂದೆ ಅಟ್ಲಾಂಟದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ನಾನು ಭಾಗವಹಿಸಿದ್ದೆ.
– ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ
ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿ.ಇ.ಒ ಹೇಮಂತ್.ಎನ್, ಪಾಲಿಕೆ ಕಮಿಷನರ್ ಡಾ. ಕವಿತಾ ಯೋಗಪ್ಪನವರ್ ಸೇರಿದಂತೆ ಹಲವರು ಇದ್ದರು.






ಇದನ್ನೂ ಓದಿ » ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?
Government employees association district level sports meet in Shivamogga Nehru Stadium.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200