ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜಿಲ್ಲಾ ಕೇಂದ್ರದಲ್ಲಿ 500 ಮತ್ತು ತಾಲೂಕು ಕೇಂದ್ರದಲ್ಲಿ 50 ಹಾಸಿಗೆಯ ಕೋವಿಡ್ ಆಸ್ಪತ್ರೆಗಳನ್ನು ತಕ್ಷಣದಿಂದಲೇ ಸಜ್ಜುಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆನ್‍ಲೈನ್ ವಿಡಿಯೋ ಸುದ್ದಿಗೋಷ್ಠಿ ನಡೆಸಿದ ಸುಂದರೇಶ್, ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ 25 ಹೆಚ್ಚುವರಿ ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಇದರಲ್ಲಿ ಪ್ರತಿ ತಾಲೂಕಿಗೆ ಎರಡು ಆಂಬುಲೆನ್ಸ್ ಒದಿಗಿಸಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ
ಕರೋನ ನಿಯಂತ್ರಣ ಮತ್ತು ಜಾಗೃತಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಬೇಕಿದೆ. ಜಿಲ್ಲೆಯಲ್ಲಿ ಯಾವ್ಯಾವ ಖಾಸಗಿ ಆಸ್ಪತ್ರೆಯಲ್ಲಿ ಕರೋನಾಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದನ್ನು ಜಿಲ್ಲಾಡಳಿತ ಸಾಮಾಜಿಕ ಜಾಲತಾಣದ ಜನರಿಗೆ ತಿಳಿಸಬೇಕಿದೆ ಎಂದು ಆಗ್ರಹಿಸಿದರು. ಚಿಕಿತ್ಸೆಗೆ ಆಸ್ಪತ್ರೆಗಳು ಕೊರತೆಯಾದರೆ ಹಾಸ್ಟೆಲ್‍ಗಳು, ಕಲ್ಯಾಣ ಮಂದಿರಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ವ್ಯಾಪಕ ಭ್ರಷ್ಟಾಚಾರ
ರಾಜ್ಯದಲ್ಲಿ ಕೊರೊನಾ ತಡೆಯುವ ನೆಪದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬೆಡ್‍ಗಳ ಬಾಡಿಗೆ, ವೆಂಟಿಲೇಟರ್‍ಗಳನ್ನು ಖರೀದಿಸುವಲ್ಲಿ ೨೫ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಬಾಡಿಗೆ ತರದಂತೆ ಅಧಿಕಾರಿಗಳಿಗೆ ಎಚ್ಚರ ನೀಡಿದ್ದರೂ ಸಚಿವರುಗಳ ಭ್ರಷ್ಟಾಚಾರ ನಿಂತಿಲ್ಲ. ಸಿ.ಎಂ ಯಾರನ್ನೂ ಕಂಟ್ರೋಲ್ ಮಾಡದ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ. ಸಚಿವರುಗಳು ಮಾನವೀಯತೆ ಮರೆತು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಮುಖ್ಯಮಂತ್ರಿಗಳೇ ಆದೇಶ ಪಾಲಿಸುವಂತೆ ಬೇಡಿಕೊಳ್ಳುವಂತಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಚಂದ್ರಭೂಪಾಲ್ ಉಪಸ್ಥಿತರಿದ್ದರು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]