ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021
ಶಿವಮೊಗ್ಗದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ರಸ್ತೆಯ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಎಲ್.ಬಿ.ಎಸ್ ನಗರದಿಂದ ಒಂದು ಕಿ.ಮೀ.ವರೆಗೆ ರಸ್ತೆಯ ಡಿವೈಡರ್ ಮೇಲೆ ಅಲಂಕಾರಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಆಕರ್ಷಕ ವಿದ್ಯುತ್ ದೀಪಗಳಿಗೆ ಇವತ್ತು ಸಂಜೆಯಿಂದ ಚಾಲನೆ ಸಿಕ್ಕಿದೆ. 59 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಲಾಗಿದೆ.
ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು.
ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಕಾರ್ಪೊರೇಟರ್ ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪ್ರಮುಖರಾದ ಬಳ್ಳೆಕರೆ ಸಂತೋಷ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200