ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಲಾಗಿದೆ. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.
ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದೆ. ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಆಗಲಿದೆ. ಅಲ್ಲದೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ
30ಕ್ಕೂ ಹೆಚ್ಚು ಮಾತ್ರೆ ನುಂಗಿದ ಮಹಿಳೆ, ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ, ಆಗಿದ್ದೇನು?

ಈ ಸುದ್ದಿಯನ್ನೂ ಓದಿ
ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಆಗಸ್ಟ್ 25ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ?