ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿಯೇ ಸುಸಜ್ಜಿತ ಕಚೇರಿ, ಬಲಿಷ್ಠ ಸಂಘಟನೆ

Published On : ಫೆಬ್ರವರಿ 10, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 10 FEBRUARY 2023

SHIMOGA : NSUI ಸಂಘಟನೆ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ, ಸಮಾಜದಲ್ಲಿ ವ್ಯಕ್ತಿಗತ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಿಲ್ಲಾ ಎನ್.ಎಸ್.ಯು.ಐ. ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

Shimoga-NSUI-Office-Inagurated-by-DK-Shivakumar

ನಾನು NSUI ನಿಂದ ರಾಜಕೀಯ ಜೀವನ ಆರಂಭಿಸಿದೆ. ಇಂದು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿದ್ದೇನೆ. ಇದಕ್ಕೆ ಕಾರಣ ವಿದ್ಯಾರ್ಥಿ ದೆಸೆಯಲ್ಲಿಯೇ ನನ್ನಲ್ಲಿ ರಾಜಕೀಯ ಪ್ರಜ್ಞೆ ಮೂಡಿದ್ದು. ಎನ್.ಎಸ್.ಯು.ಐ. ದೇಶದ ಭವಿಷ್ಯದ ನಾಯಕರನ್ನು ಬೆಳೆಸುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಹೊರತುಪಡಿಸಿದರೆ ರಾಜ್ಯದಲ್ಲಿ ಬೇರೆಲ್ಲೂ NSUI ಇಷ್ಟು ಸುಸಜ್ಜಿತ ಕಚೇರಿ ಹೊಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡರು ಸಕ್ರಿಯವಾಗಿದ್ದು ಮಾದರಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಎನ್.ರಮೇಶ್, ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಮುಖಂಡರಾದ ವಿಜಯಕುಮಾರ್, ಕೆ.ದೇವೇಂದ್ರಪ್ಪ, ಸಿ.ಜಿ.ಮಧುಸೂದನ್, ಕೆ.ಚೇತನ್, ಮಹಮ್ಮದ್ ನಿಹಾಲ್ ಮುಂತಾದವರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2023

Leave a Comment