SHIVAMOGGA LIVE NEWS, 30 JANUARY 2024
ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, ಬಾಧಕಗಳ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆ ಆಂಧ್ರ ಮತ್ತು ತೆಲಂಗಾಣದಲ್ಲಿಯು ಇದೇ ರೀತಿಯ ಸಮಸ್ಯೆಯಾಗಿತ್ತು ಎಂದರು.
ಸಂಜೆ ವೇಳೆಗೆ ಸಾಲ ವಸೂಲಿಗೆ ಹೋಗುವಂತಿಲ್ಲ. ಇನ್ನು, ಮೈಕ್ರೋ ಫೈನಾನ್ಸ್ ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ ನೀಡುವ ಪ್ರಯತ್ನವಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರದ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪ್ರಣಾಳಿಕೆಯಲ್ಲಿ ಘೋಷಿಸಿದ್ದೆವು. ಈಗ ಮುಖ್ಯಮಂತ್ರಿ ಅವರು ನಿರ್ಧಾರ ಪ್ರಕಟಿಸಿದ್ದಾರೆ. ಪ್ರಕರಣಗಳ ಕುರಿತು ಕನ್ನಡಪರ ಸಂಘಟನೆಗಳು ಅರ್ಜಿ ಸಲ್ಲಿಸಲಿ. ಪ್ರಕರಣಗಳ ನೈಜತೆ ಕುರಿತು ಕ್ಯಾಬಿನೆಟ್ ಸಬ್ ಕಮಿಟಿ ಪರಿಶೀಲಿಸಲಿದೆ. ನಂತರ ಕ್ಯಾಬಿನೆಟ್‌ನಲ್ಲಿ ಮಂಡಿಸಲಾಗುತ್ತದೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಪತ್ನಿ ಸಹಿತ ಶಿವಮೊಗ್ಗಕ್ಕೆ ಡಿಸಿಎಂ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಇನ್ನು, ಅಶೋಕ ವೃತ್ತದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹೂಮಳೆಯ ಸ್ವಾಗತ ನೀಡಲಾಯಿತು.
ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ರಾಜ್ಯ ಸರ್ಕಾರದಿಂದ ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆʼ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200