ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಜುಲೈ 15ರಂದು ವಿವಿಧೆಡೆ ಲಂಬಾಣಿ ತಾಂಡಾಗಳಿಗೆ ಅವರು ಭೇಟಿ ನೀಡಲಿದ್ದಾರೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಕರೋನ ಸಂಕಷ್ಟ ಕಾಲದಲ್ಲಿ ಲಾಂಬಾಣಿ ತಾಂಡಾದಲ್ಲಿ ಉಂಟಾದ ಸಮಸ್ಯೆಗಳ ಕುರಿತು ಅವರು ಅಧ್ಯಯನ ನಡೆಸಲಿದ್ದಾರೆ. ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?
ಜುಲೈ 15ರಂದು ಬೆಳಗ್ಗೆ 11 ಗಂಟೆಗೆ ಹೊನ್ನಾಳಿ ತಾಲೂಕು ಸುರಗೊಂಡನಕೊಪ್ಪದ ತಾಂಡಾಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಶಿಕಾರಿಪುರ ಮತ್ತು ಸಂಜೆ 5ಕ್ಕೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
ಅದೆ ದಿನ ರಾತ್ರಿ 9 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200