ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | EXAM | 30 ಮೇ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ವೈದ್ಯರೊಬ್ಬರು ಮೊದಲ ಪ್ರಯತ್ನದಲ್ಲಿಯೆ ಯುಪಿಎಸ್’ಸಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 641ನೇ ರಾಂಕ್ ಪಡೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್.ಬಿ.ಎಸ್ ನಗರದ ನಿವಾಸಿ ಡಾ. ಪ್ರಶಾಂತ್ ಕುಮಾರ್ ಅವರು 641ನೇ ರಾಂಕ್ ಪಡೆದಿದ್ದಾರೆ. ಯಾವುದೆ ಸಂಸ್ಥೆಗಳಿಂದ ಕೋಚಿಂಗ್ ಪಡೆಯದೆ, ಸ್ವಯಂ ಪ್ರಯತ್ನದಿಂದ ಪಾಸಾಗಿದ್ದಾರೆ. 2020ರಲ್ಲಿ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಪ್ರಶಾಂತ್ ಕುಮಾರ್ ಅವರು ಎಂಬಿಬಿಎಸ್ ಪದವಿ ಪಡೆದಿದ್ದರು
‘ದೊಡ್ಡ ಮಟ್ಟದಲ್ಲಿ ಜನ ಸೇವೆ ಮಾಡುವ ಉದ್ದೇಶದಿಂದ ಯುಪಿಎಸ್’ಸಿ ಪರೀಕ್ಷೆ ಎದುರಿಸಿದ್ದೆ’ ಎಂದು ವಾಟ್ಸಪ್ ಮೂಲಕ ತಿಳಿಸಿದ್ದಾರೆ.
ಡಾ. ಪ್ರಶಾಂತ್ ಕುಮಾರ್ ಅವರ ತಂದೆ ಬಿ.ಓಂಕಾರಪ್ಪ ಅವರು ಬಿ.ಹೆಚ್.ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ತಾಯಿ ರೇಖಾ ಅವರು ಗೃಹಿಣಿಯಾಗಿದ್ದಾರೆ.
ಇದನ್ನೂ ಓದಿ – ಕಾರಿಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಲಾರಿ, ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.