ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 20 JULY 2023
SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ (Doctorate) ನೀಡಲಿದೆ. ಜು.21ರಂದು ನಡೆಯಲಿರುವ 8ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ. ಆರ್.ಸಿ.ಜಗದೀಶ್ ಅವರು, ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರ ಅನುಮತಿಗೆ ಕಳುಹಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊಡುಗೆ ಪರಿಗಣಿಸಿ ಗೌರವ ಡಾಕ್ಟರೇಟ್ (Doctorate) ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಡಿಯೂರಪ್ಪ ಅವರು ಕೃಷಿಗೆ ಪ್ರತ್ಯೇಕ ಆಯವ್ಯಯ ಮಂಡಿಸಿದ್ದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ವಿನೂತನ ಯೋಜನೆಗಳನ್ನು ಜಾರಿಗೊಳಿಸಿದ್ದು, ಕೃಷಿ ಶಿಕ್ಷಣ, ಸಂಶೋಧನೆಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಮುನ್ನುಡಿ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಡಾ. ಆರ್.ಸಿ.ಜಗದೀಶ್ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, 2 ದಿನ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?
ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅವರಣದಲ್ಲಿ ಘಟಿಕೋತ್ಸವ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. 8ನೇ ಘಟಿಕೋತ್ಸವದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಪದವಿಯ 8, ಎಂ.ಎಸ್ಸಿಯ 7 ವಿದ್ಯಾರ್ಥಿಗಳಿಗೆ ಒಟ್ಟು 37 ಚಿನ್ನದ ಪದಕಗಳನ್ನು ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಪಡೆದ 409 ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ಪಡೆದ 101 ವಿದ್ಯಾರ್ಥಿಗಳು, 23 ವಿದ್ಯಾರ್ಥಿಗಳು ಪಿಹೆಚ್‌ಡಿ ಪಡೆದಿದ್ದಾರೆ.
ಕುಲಸಚಿವ ಡಾ. ಕೆ.ಸಿ.ಶಶಿಧರ್ ಸುದ್ದಿಗೋಷ್ಠಿಯಲ್ಲಿದ್ದರು.