SHIVAMOGGA LIVE NEWS | 3 NOVEMBER 2022
SHIMOGA | ಕೋವಿಡ್ ಸಂದರ್ಭ ಪ್ರಾಣದ ಹಂಗು ತೊರೆದು ಹಲವರ ರಕ್ಷಣೆ ಮಾಡಿದ ವೈದ್ಯರಿಗೆ (doctors service) ಆಭಾರಿಯಾಗಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗದ ಸಾಗರ ರಸ್ತೆಯ ಪಿಇಎಸ್ ಕಾಲೇಜು ಮುಂಭಾಗದ ಶಕ್ತಿ ಧಾಮದಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಆರೋಗ್ಯ ಭವನ ಕಟ್ಟಡ ಶಂಕುಸ್ಥಾಪನೆ ನೆರವೇರಿ ಸಂಸದ ರಾಘವೇಂದ್ರ ಮಾತನಾಡಿದರು.
ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕೋವಿಡ್ ಸಂದರ್ಭ ಸಲ್ಲಿಸಿದ ಸೇವೆ (doctors service) ಶ್ಲಾಘನೀಯ. ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಜಿಲ್ಲಾ ಆಸ್ಪತ್ರೆಗಳವರೆಗೆ ಮೂಲ ಸೌಕರ್ಯ ಸಬಲಗೊಳಿಸಲಾಗಿದೆ. ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲಾಗಿದೆ. ವೈದ್ಯರ ವೇತನ ಸೇರಿದಂತೆ ಜಿಲ್ಲೆಯಲ್ಲಿ 1,117 ವೈದ್ಯರನ್ನು ಭರ್ತಿ ಮಾಡಿ ವ್ಯವಸ್ಥೆಯನ್ನು ಬಲಗೊಳಿಸಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಕೋವಿಡ್ ಸಮಯದಲ್ಲಿ ಜಿಲ್ಲೆಯ ವೈದ್ಯರು ಮಾದರಿ ಕೆಲಸ ಮಾಡಿದ್ದಾರೆ. ಕುಟುಂಬದಿಂದ ದೂರ ಇದ್ದು ಜೀವದ ಆಸೆ ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ್ದೀರಿ. ಇಷ್ಟೆಲ್ಲಾ ಮಾಡಿದರೂ ಕೆಲವು ಸ್ನೇಹಿತರು ಮರಣ ಹೊಂದಿದ್ದು ವಿಷಾಧನೀಯ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಕಾಲದಲ್ಲಿ ಉತ್ತಮ ಔಷಧೋಪಚಾರ, ಸಲಕರಣೆಗಳು ಮತ್ತು ಲಸಿಕೆ ವಿತರಣೆಯಿಂದ ಜನತೆಯ ಪ್ರಾಣ ಉಳಿಸುವ ಕೆಲಸ ಆಗಿದೆ ಎಂದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿ.ಪಂ ಸಿಇಓ ಎನ್ ಡಿ ಪ್ರಕಾಶ್, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಿದ್ದನಗೌಡ, ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಡಾ.ನಾಗರಾಜ ನಾಯ್ಕ್, ಡಾ.ಕಿರಣ್ ಡಾ ಪೃಥ್ವಿ ಮತ್ತಿತರ ಮುಖಂಡರು ಹಾಗೂ ಆರೋಗ್ಯ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.