ಶಿವಮೊಗ್ಗಕ್ಕೆ 350ಕ್ಕೂ ಹೆಚ್ಚು ಡಾಕ್ಟರ್‌ಗಳು, ಎರಡು ದಿನ ಪ್ರಮುಖ ಚರ್ಚೆ, ಏನಿದು ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಇಂಟರ್‌ನ್ಯಾಷನಲ್ ಲಿಂಗಾಯತ ಯೂತ್ ಫೋರಮ್ ಶಿವಮೊಗ್ಗ ಚಾಪ್ಟರ್‌ನಿಂದ ಸೆ.20 ಮತ್ತು 21ರಂದು ಬೆಳಗ್ಗೆ 9.30ಕ್ಕೆ ನಗರದ ಸರ್ಜಿ ಕನ್ವೆಷನ್ ಹಾಲ್‌ನಲ್ಲಿ ಡಾಕ್ಟರ್‌ ಪ್ರಿನ್ಯುರ್ ಸಮ್ಮಿಟ್ (Doctors Summit) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಧನಂಜಯ ಸರ್ಜಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದರಾದ ಬಿ.ವೈ.ರಾಘವೇಂದ್ರ, ಡಾ. ಪ್ರಭಾ ಮಲ್ಲಿಕಾರ್ಜುನ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೆಂಗಳೂರು ರಾಮಯ್ಯ ಆಸ್ಪತ್ರೆ ಮುಖ್ಯ ಕಾರ್ಯನಿರ್ವಾಹಕ ಡಾ.ರಾಘವೇಂದ್ರ ಸ್ವಾಮಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಕೆ.ಎಸ್.ನವೀನ್, ಡಾ.ಧನಂಜಯ ಸರ್ಜಿ, ಐಲೈಫ್ ಟ್ರಸ್ಟ್‌ ಅಧ್ಯಕ್ಷ ಸಂತೋಷ್ ಕೆಂಚಾಂಬ, ನಂಜಪ್ಪ ಆಸ್ಪತ್ರೆಯ ಡಾ.ಅವಿನಾಶ್ ಬೆನಕಪ್ಪ, ಐಕ್ಯಾಟ್ ಏರ್ ಅಂಬ್ಯುಲೆನ್ಸ್‌ನ ಡಾ.ಶಾಲಿನಿ ನಲ್ವಾಡ್, ಐಲೈಫ್ ಜಿಲ್ಲಾಧ್ಯಕ್ಷ ಕೆ.ಕಿರಣ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದರು.

Shimoga-Lingayath-Doctors-Press-meet

350ಕ್ಕೂ ಹೆಚ್ಚು ವೈದ್ಯರು

ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ 350 ಕ್ಕೂ ಹೆಚ್ಚು ವೈದ್ಯಕೀಯ, ದಂತ, ಆಯುರ್ವೇದಿಕ್ ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಎದುರಾಗುವ ಕಾನೂನು ಸಮಸ್ಯೆ, ಅವುಗಳ ಪರಿಹಾರ ಕ್ರಮ, ಡಿಜಿಟಲ್ ತಂತ್ರಜ್ಞಾನ ಬಳಕೆ ಸೇರಿದ ಹಲವು ವಿಷಯಗಳು ಕುರಿತು ಚರ್ಚಿಸಲಾಗುತ್ತದೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು.

doctors

ಸೆ.22ರಂದು ಸಮ್ಮೇಳನಕ್ಕೆ ಆಗಮಿಸಿರುವ ವೈದ್ಯರನ್ನು ಸಿಗಂದೂರಿಗೆ ನೆಟ್‌ವರ್ಕಿಂಗ್ ಟ್ರಿಪ್ ಕರೆದುಕೊಂಡು ಹೋಗಲಾಗುವುದು. ಇದರಲ್ಲಿ ವೈದ್ಯರು ವೈಯಕ್ತಿಕವಾಗಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಅನುಕೂವಾಗಲಿದೆ.

  • ಕೆ.ಕಿರಣ್ ಕುಮಾರ್, ಐಲೈಫ್ ಜಿಲ್ಲಾಧ್ಯಕ್ಷ

RED-LINE-

ಸುದ್ದಿಗೋಷ್ಠಿಯಲ್ಲಿ ಡಾ.ಅವಿನಾಶ್ ಬೆನಕಪ್ಪ, ರವೀಂದ್ರ ಬೆಣ್ಣೆಹಳ್ಳಿ, ಹೆಚ್.ಸಿ.ಶಿವಕುಮಾರ್, ಡಾ.ಶಶಿಕಾಂತ್, ಡಾ.ಶಂಭುಲಿಂಗ ಬಂಕೊಳ್ಳಿ ಮತ್ತಿತರರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ 5ನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ, ಪ್ರತಿಭಟನೆಗೆ ಕಾರಣವೇನು?

JNNCE-Admission-Advt-scaled

Doctors Summit in Sarji Convention hall

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment