ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್ ಸ್ಟೋರೇಜ್. ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು ಹರಿಸಬೇಕಿದೆ. 3 ಟಿಎಂಸಿ ನೀರು ಬಾಕಿ ಇದೆ. ಇದನ್ನು ನಾಲೆಯ ಮೂಲಕ ಅಡಿಕೆ, ತೆಂಗಿನ ತೋಟಕ್ಕೆ ಹರಿಸಬೇಕಿದೆ ಎಂದು ಆಗ್ರಹಿಸಿದರು.
‘ಮತ್ತೆ ನದಿಗೆ ನೀರು ಬಿಡಬಾರದುʼ
ಗದಗ, ಬೆಟಗೇರಿ ನಗರಕ್ಕೆ ಕುಡಿಯುವ ನೀರಿಗೆ ಹರಿಸಬೇಕು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ನೀರಾವರಿ ಇಲಾಖೆಗೆ ಪತ್ರ ಬರೆದಿದ್ದಾರೆ. ಈಗಾಗಲೇ ಮಾರ್ಚ್ 30 ರಿಂದ ಏಪ್ರಿಲ್ 6ರವರೆಗೆ ಗದಗ, ಬೆಟಗೇರಿ ನಗರದ ಕುಡಿಯುವ ನೀರಿಗಾಗಿ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದೆ. ಈ ಮೊದಲು ಒಮ್ಮೆ ನೀರು ಹರಿಸಿದರೆ ಮೂರು ತಿಂಗಳು ಬಳಕೆ ಮಾಡುತ್ತಿದ್ದರು. ಹಾಗಾಗಿ ಜಲಾಶಯದಿಂದ ನದಿಗೆ ನೀರು ಹರಿಸಬಾರದು. ನೀರು ಹರಿಸಿದರೆ ಶಿವಮೊಗ್ಗ, ದಾವಣಗೆರೆ, ಹಾವೇರಿ ಜಿಲ್ಲೆಯ ಅಡಿಕೆ, ತೆಂಗು ಬೆಳೆಗಾರರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಆರೋಪಿಸಿದರು.
ಇದನ್ನೂ ಓದಿ – ‘ಕರ್ನಾಟಕಕ್ಕೆ ಮೋದಿ ಚೊಂಬು, ಲೇವಡಿ ಮಾಡಿದ್ದ ಮೋದಿಯಿಂದಲೇ ಈಗ ಗ್ಯಾರಂಟಿ ಪದ ಬಳಕೆ’