ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 27 JULY 2023
SHIMOGA : ಹಾಫ್ ಹೆಲ್ಮೆಟ್ (Half Helmet) ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

‘ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸ್ ಸಿಬ್ಬಂದಿ ಹಾಫ್ ಹೆಲ್ಮೆಟ್ (Half Helmet) ಧರಿಸುವಂತಿಲ್ಲ. ಒಂದು ವೇಳೆ ಹಾಫ್ ಹೆಲ್ಮೆಟ್ ಧರಿಸಿದರೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆʼ ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಎಲ್ಲ ಪೊಲೀಸ್ ಠಾಣೆಗೆ ಸೂಚನೆ ರವಾನಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, ರಾಶಿ ರಾಶಿ ಹಾಫ್ ಹೆಲ್ಮೆಟ್ ವಶಕ್ಕೆ, ವಿಡಿಯೋಗಳು ವೈರಲ್
ಹಾಫ್ ಹೆಲ್ಮೆಟ್ ವಿರುದ್ಧ ಶಿವಮೊಗ್ಗದಲ್ಲಿ ಸಂಚಾರ ಠಾಣೆ ಪೊಲೀಸರು ಮಂಗಳವಾರ ದಿಢೀರ್ ಕಾರ್ಯಾಚರಣೆ ನಡೆಸಿದರು. ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನ ವಶಕ್ಕೆ ಪಡೆದಿದ್ದರು. ಹೆಲ್ಮೆಟ್ ಮಾರುವ ಅಂಗಡಿಗಳ ಮೇಲೆ ದಾಳಿ ನೆಡಸಿ, 600 ಹಾಫ್ ಹೆಲ್ಮೆಟ್ ವಶಪಡಿಸಿಕೊಂಡಿದ್ದರು.
.jpeg)
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು





