ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರನ್ನು ಕಾರ್ಯಕರ್ತರು ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ (Procession) ಮಾಡಿದರು.
ಮೈಸೂರಿನಲ್ಲಿ ಮತ ಎಣಿಕೆ ನಡೆಸಲಾಗಿತ್ತು. ಗೆಲುವು ಸಾಧಿಸಿದ ಬಳಿಕ ಶುಕ್ರವಾರ ಸಂಜೆ ಡಾ. ಧನಂಜಯ ಸರ್ಜಿ ಶಿವಮೊಗ್ಗಕ್ಕೆ ಮರಳಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಡಾ. ಧನಂಜಯ ಸರ್ಜಿ ಅವರಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸ್ವಾಗತಿಸಿದರು. ಬೆಕ್ಕಿನಕಲ್ಮಠದ ಮುಂಭಾಗದಿಂದ ಬಿಜೆಪಿ ಕಚೇರಿವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಯಿತು.
ಕಾರ್ಯಕರ್ತರ ಸಮ್ಮುಖದಲ್ಲಿ ಅಭಿನಂದನೆ
ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಡಾ. ಧನಂಜಯ ಸರ್ಜಿ ಅವರಿಗೆ ಶಿವಮೊಗ್ಗ ಬಿಜೆಪಿ ಕಾರ್ಯಾಲಯದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಹಿರಿಯರ ಮಾರ್ಗದರ್ಶನ, ಕಾರ್ಯಕರ್ತರ ಶ್ರಮದಿಂದ ಗೆಲುವು ಸಿಕ್ಕಿದೆ. ಹಿಂದಿನ ಎಲ್ಲ ದಾಖಲೆಗಳು ಈ ಚುನಾವಣೆಯಲ್ಲಿ ಮುರಿದಿವೆ. ಕೇವಲ 21 ದಿನದಲ್ಲಿ ಆರು ಜಿಲ್ಲೆಗಳ 30 ಕ್ಷೇತ್ರಗಳನ್ನು ಸುತ್ತಿ ಗೆಲವು ದಾಖಲಿಸಲಾಗಿದೆ. ಕಾರ್ಯಕರ್ತರ ಋಣ ತೀರಿಸುವ ಕೆಲಸ ಮಾಡುತ್ತೇನೆ.ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ನೂತನ ಸದಸ್ಯ
ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಶಾಸಕರಾದ ಎಂ.ಬಿ.ಭಾನುಪ್ರಕಾಶ್, ಕೆ.ಜಿ.ಕುಮಾರಸ್ವಾಮಿ, ಆರ್.ಕೆ.ಸಿದ್ದರಾಮಣ್ಣ ಸೇರಿದಂತೆ ಹಲವರು ಇದ್ದರು.
BANGALORE : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ದಾಖಲಿಸುತ್ತಿದ್ದಂತೆ ಡಾ. ಧನಂಜಯ ಸರ್ಜಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪೆಡದರು. ಈ ಸಂದರ್ಭ ಯಡಿಯೂರಪ್ಪ ಅವರು ಡಾ. ಧನಂಜಯ ಸರ್ಜಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದಿಸಿದರು. ನಮಿತಾ ಸರ್ಜಿ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವರು ಇದ್ದರು.ಯಡಿಯೂರಪ್ಪ ಆಶೀರ್ವಾದ ಪಡೆದ ಸರ್ಜಿ
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸ್ವಲ್ಪ ಯಾಮಾರಿದರೂ ಕೈ, ಕಾಲು ಮುರಿದುಕೊಳ್ಳುವುದು ಫಿಕ್ಸ್, ಕಾರಣವೇನು?