ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 7 JANUARY 2025
ಶಿವಮೊಗ್ಗ : ಕಳೆದ ಸೆಪ್ಟೆಂಬರ್‌ನಿಂದ ನವೆಂಬರ್ ತಿಂಗಳವರೆಗೆ ಶಿವಮೊಗ್ಗದ ಐವರು ಮಕ್ಕಳಲ್ಲಿ HMP ಸೋಂಕು ತಗುಲಿರುವುದು ದೃಢವಾಗಿತ್ತು. ಈ ಮಕ್ಕಳು ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಸೋಂಕಿನ ಕುರಿತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.
ಟಿವಿ ಮಾಧ್ಯಮದಲ್ಲಿ ವರದಿ ಪ್ರಕಟವಾದ ಬೆನ್ನಿಗೆ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

ಸೆಪ್ಟೆಂಬರ್‌ನಿಂದ ನವೆಂಬರ್ ತಿಂಗಳ ಒಳಗೆ ಐವರು ಮಕ್ಕಳಲ್ಲಿ ಹೆಚ್‌ಎಂಪಿವಿ ಪಾಸಿಟಿವ್ ಬಂದಿತ್ತು. ಎಲ್ಲ ಮಕ್ಕಳು ಚಿಕಿತ್ಸೆ ಪಡೆದು ಮರಳಿದ್ದಾರೆ. ಇದು ಸಾಮಾನ್ಯ ವೈರಸ್. ಕೆಮ್ಮು, ಶೀತ, ಜ್ವರ ಬರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವವರು, ಹಿರಿಯರು ಎಚ್ಚರಿಕೆ ವಹಿಸಬೇಕು. ಹೆಚ್‌ಎಂಪಿ ವೈರಸ್ ಕುರಿತು ಜನ ಆತಂಕ ಪಡಬೇಕಿಲ್ಲ.
ಡಾ.ಧನಂಜಯ ಸರ್ಜಿ, ಮಕ್ಕಳ ತಜ್ಞ
![]()
ಚಿಕಿತ್ಸೆಗೆ ದಾಖಲಾಗಿದ್ದ ಮಕ್ಕಳ ಸ್ವ್ಯಾಬ್ ಪರೀಕ್ಷೆ ಮಾಡಿದಾಗ ಐವರಲ್ಲಿ ಹೆಚ್‌ಎಂಪಿ ಸೋಂಕು ತಗುಲಿರುವುದು ಗೊತ್ತಾಗಿತ್ತು. ಐವರು ಮಕ್ಕಳಿಗು ಚಿಕಿತ್ಸೆ ನೀಡಲಾಗಿದ್ದು ಗುಣವಾಗಿದ್ದಾರೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಬಸ್, ಆಗಿದ್ದೇನು?
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು















