ಶಿವಮೊಗ್ಗದ ಲೈವ್.ಕಾಂ | SHIMOGA NEWS | 12 ಫೆಬ್ರವರಿ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ ಕಾಮಗಾರಿಯು ಮೇ ಅಥವಾ ಜೂನ್ ವೇಳೆ ಪೂರ್ಣಗೊಳ್ಳಲಿದೆ. ಜುಲೈ ಹೊತ್ತಿಗೆ ಟರ್ಮಿನಲ್ ಕಾಮಗಾರಿ ಮುಗಿಯಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಿ ವಿಮಾನ ನಿಲ್ದಾಣದ ಕುರಿತು ಚರ್ಚೆ ನಡೆಸಿದ್ದೇನೆ. ವಿಮಾನಗಳ ಮಾರ್ಗ ಕುರಿತು ಪಟ್ಟಿಯನ್ನು ಸಿದ್ಧಪಡಿಸಿ ಕೊಟ್ಟಿದ್ದೇನೆ ಎಂದರು.
ಡಿಸೆಂಬರ್ ವೇಳೆಗೆ ಪೂರ್ಣ
ರನ್ ವೇ, ಟರ್ಮಿನಲ್ ಕಾಮಗಾರಿ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ. ಡಿಸೆಂಬರ್ ಹೊತ್ತಿಗೆ ವಿಮಾನ ನಿಲ್ದಾಣದ ಕಾಮಗಾರಿ ಮುಗಿಯಲಿದೆ. ವಿಮಾನ ಹಾರಾಟದ ಮಾರ್ಗಗಳು ಕೂಡ ನಿರ್ಧಾರವಾಗಲಿದ್ದು, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣದ ಸಜ್ಜಾಗಲಿದೆ ಎಂದರು.
ಮುಂದಿನ ವಾರ ಡ್ರಾಫ್ಟ್ ಸಿದ್ಧ
ವಿಮಾನ ನಿಲ್ದಾಣದ ನಿರ್ವಹಣೆ ಕುರಿತು ಚರ್ಚೆ ನಡೆಯುತ್ತಿದೆ. ನಿರ್ವಹಣೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕೋ ಅಥವಾ ವಿಮಾನ ನಿಲ್ದಾಣ ಪ್ರಾಧಿಕಾರ ವಹಿಸಿಕೊಳ್ಳಬೇಕೋ ಅನ್ನುವ ಕುರಿತು ಚರ್ಚಿಸಲಾಗುತ್ತಿದೆ. ಈ ಸಂಬಂಧ ಮುಂದಿನ ವಾರದ ಹೊತ್ತಿಗೆ ಡ್ರಾಫ್ಟ್ ಸಿದ್ಧಾವಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣದಿಂದ 11 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಮನವಿ, ಪಟ್ಟಿಯಲ್ಲಿ ಯಾವೆಲ್ಲ ಮಾರ್ಗಗಳಿವೆ?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






