ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 JANUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ನಗರದ ವಿವಿಧೆಡೆ ಜ.25ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರಣವೇನು?
ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಜ.25 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಧಕ್ಕರ್ಧ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ
ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇದೆ. ಈ ಹಿನ್ನೆಲೆ ನಗರದ ವಿವಿಧೆಡೆ ಜ.25ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು
ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರ್ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.