ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯ ಗ್ಯಾಸ್ ಬಂಕ್‌ಗಳಲ್ಲಿ ಮನಸ್ಸಿಗೆ ಬಂದ ಹಾಗೆ ಸಿಎನ್‌ಜಿ ದರ (CNG prices) ನಿಗದಿ ಮಾಡಿ ಆಟೋ ಚಾಲಕರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಯಿತು.
ನಿತ್ಯ ಸಿಎನ್‌ಜಿ ದರ ಏರಿಕೆ ಆಗುತ್ತಲೇ ಇದೆ. ಈ ಬಗ್ಗೆ ಇಲ್ಲಿಯವರೆಗೂ ಸ್ಥಳೀಯ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಆಟೊಗಳ ಎಫ್.ಸಿ ದರ ಮೂರು ಪಟ್ಟು, ಇನ್ಸೂರೆನ್ಸ್ ಮೊತ್ತ, ಬಿಡಿಭಾಗಗಳು, ಮೆಕಾನಿಕ್ ದರ ದುಪ್ಪಟ್ಟು ಏರಿಕೆಯಾಗಿವೆ.

ಇನ್ನೊಂದೆಡೆ ಹಾಲು, ತರಕಾರಿ, ಅಕ್ಕಿ, ದಿನಸಿ ಪದಾರ್ಥ ಸೇರಿ ಪ್ರತಿಯೊಂದರ ದರವೂ ಹೆಚ್ಚಾಗಿದೆ. ಜೀವನ ಮಾಡುವುದು ಕಷ್ಟವಾಗಿದೆ. ಆಟೋ ಚಾಲಕರ ಬದುಕು ದುಸ್ತರವಾಗಿದೆ. ಬಂಕ್ ಗಳಲ್ಲಿ ಬೇಕಾ ಬಿಟ್ಟಿ ಗ್ಯಾಸ್ ದರ ಹೆಚ್ಚಳವಾಗುತ್ತಿರುವುದಕ್ಕೆ ಕಡಿವಾಣ ಹಾಕಿ ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದರು.
ಇದನ್ನೂ ಓದಿ : ಬಂಕ್ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ಏನಿದು?

LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

- ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು










