ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021
ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಿಗೆ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕ್ವಾರಿ, ಕ್ರಷರ್ ಮತ್ತು ಮರಳು ಸಾಗಾಣಿಕಾ ಜಿಲ್ಲಾ ಸಮಿತಿ ಸಭೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಕ್ವಾರಿಗಳ ಸಮಗ್ರ ಸ್ಥಿತಿಗತಿ ಪರಿಶೀಲನೆಗೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪರವಾನಿಗೆ ಪಡೆದವರು ನಿಯಮಾವಳಿ ಉಲ್ಲಂಘಿಸದೆ ಗಣಿಗಾರಿಕೆ ಮತ್ತು ಸಾಗಾಟ ನಡೆಸಬೇಕು. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಗಣಿಗಾರಿಕೆ ಮೇಲೆ ನಿಗಾ ವಹಿಸಬೇಕು. ಸ್ಥಳ ತಪಾಸಣೆ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಮಟ್ಟದ ಅಧಿಕಾರಿ ಸಹ ಉಪಸ್ಥಿತರಿರಬೇಕು ಎಂದರು.
ಪ್ರಕರಣ ದಾಖಲು
ಪ್ರಸ್ತುತ ವರ್ಷ ಇದುವರೆಗೆ ಜಿಲ್ಲೆಯಲ್ಲಿ ನಾಲ್ಕು ಅಕ್ರಮ ಮರಳು ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಮರಳುಗಾರಿಕೆಯ 33 ಪ್ರಕರಣಗಳಲ್ಲಿ 23.26 ಲಕ್ಷ ರೂ. ದಂಡ ವಿಧಿಸಲಾಗಿದೆ.
18 ಅನಧಿಕೃತ ಕಲ್ಲು ಗಣಿಗಾರಿಕೆ ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಟದ 54 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, 41 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಾಮ್ಜಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಬಿ.ಶಾಂತರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]