ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 DECEMBER 2023
SHIMOGA : ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಕೊರತೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ನಿರ್ವಹಣೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ಡಿಸಿ ನೀಡಿದ ಸೂಚನೆಗಳೇನು?
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಶೇ.28 ಮಳೆ ಕೊರತೆಯಾಗಿದೆ. ಹಾಗಾಗಿ ಕುಡಿಯುವ ನೀರಿಗೆ ಕೊರತೆ ಆಗಬಹುದಾದ ಗ್ರಾಮಗಳಿಗೆ ನೀರನ್ನು ಈಗಿನಿಂದಲೇ ಖಾಸಗಿ ಬೋರ್‌ವೆಲ್ ಗುರುತಿಸಿ ಇಟ್ಟುಕೊಳ್ಳಬೇಕು. ತಾಲ್ಲೂಕುಗಳಲ್ಲಿ ಇಓ, ತಹಶೀಲ್ದಾರ್ ಮತ್ತು ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ನೀರಿನ ಸಮಸ್ಯೆಯಾಗಬಹುದಾದ ಗ್ರಾಮ, ಪ್ರದೇಶಗಳನ್ನು ಮತ್ತೊಮ್ಮೆ ಪರಿಶೀಲಸಿ ಕ್ರಮ ಕೈಗೊಳ್ಳಬೇಕು.
ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆಗಳನ್ನು ಸಂರಕ್ಷಿಸುವ ಕೆಲಸವಾಗಬೇಕು. ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು.
ಜಾನುವಾರುಗಳಿಗೆ ಸದ್ಯಕ್ಕೆ ಮೇವಿಗೆ ಕೊರತೆ ಇಲ್ಲ. 23 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು ಇದೆ. ಶಿಕಾರಿಪುರ ಮತ್ತು ಸೊರಬ ತಾಲ್ಲೂಕಿನಲ್ಲಿ 13 ವಾರಗಳಿಗೆ ಆಗುವಷ್ಟು ಮಾತ್ರ ಇದೆ. ಒಟ್ಟಾರೆ ಹೆಚ್ಚುವರಿ ಅಗತ್ಯವಿರುವ 37 ಸಾವಿರ ಮೇವಿನ ಕಿಟ್ ತರಿಸಲು ಕ್ರಮ ವಹಿಸಲಾಗುವುದು.
ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ್, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಇತರೆ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422