ಶಿವಮೊಗ್ಗ: ರಾಜ್ಯದಲ್ಲಿ ಅಬಕಾರಿ ಮೇಲಿನ ತೆರಿಗೆ ಎದ್ವಾತದ್ವಾ ಏರಿಸುವುದರ ಮೂಲಕ ವ್ಯಸನಿಗರು ಗಾಂಜಾ ಸೇವನೆಗೆ ದಾಸರಾಗುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲು ಅಧಿವೇಶನದಲ್ಲಿ ಆಗ್ರಹಿಸಲಾಗುವುದು. ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆಯ ಹೊರೆ ಹೇರುತ್ತಿದೆ. ಅಬಕಾರಿ, ರಾಜ್ಯ ಹೆದ್ದಾರಿ, ಸ್ಟಾಂಪ್ ಡ್ಯೂಟಿ ಮೊದಲಾದವುಗಳ ಮೇಲೆ ಮನಸ್ಸಿ ಗೆ ಬಂದಂತೆ ತೆರಿಗೆ ಹೆಚ್ಚಿಸಿ ಸಾರ್ವಜನಿಕ ರನ್ನು ಲೂಟಿ ಹೊಡೆಯುತ್ತಿದೆ. ಅಬಕಾರಿ ಗುರಿಯನ್ನು ಶೇ.130 ರಿಂದ 160ಕ್ಕೆ ಏರಿಸಿದ್ದಲ್ಲದೆ ಬಾಕ್ಸ್ ಟಾರ್ಗೆಟ್ ಅನ್ನು 1,73,500 ರಿಂದ 1,99,500ಕ್ಕೆ ಏರಿಸಿದೆ. ಈ ಕುರಿತು ಬರುವ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ » ಗೋಪಿ ಸರ್ಕಲ್‌ನಿಂದ ಕಾವಡಿಗಳ ಮೆರವಣಿಗೆ, ಮಹಿಳೆಯರಿಂದ ದೀಪಗಳ ಉತ್ಸವ, ಯಾವಾಗ?
ಇತ್ತೀಚಿಗೆ ಮಠಾಧೀಶರು ರಾಜಕೀಯದ ಬಗ್ಗೆ ಮಾತನಾಡುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ರಾಜಕೀಯ ಪಕ್ಷಗಳಿಗೆ ಮಠಾಧೀಶರ ಆಶೀರ್ವಾದ ಬೇಕು. ಆದರೆ ಕೆಲವು ರಾಜಕೀಯ ಸ್ಥಿತ್ಯಂತರಗಳ ಸಂದರ್ಭ ಮಠಾಧೀಶರು ಜಾಗರೂಕತೆಯಿಂದ ಮಾತನಾಡಬೇಕು ಎಂಬುದು ತಮ್ಮ ಅಭಿಪ್ರಾಯವಾಗಿದೆ ಎಂದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






