ಡಿಎಸ್‌ಎಸ್‌ಗೆ ನೂತನ ಜಿಲ್ಲಾ ಸಂಘಟನಾ ಸಂಚಾಲಕ ನೇಮಕ

ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಿವಮೊಗ್ಗ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮದ ಹೆಚ್. ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಶಿವಮೊಗ್ಗ ಅವರು ಅ.31ರಂದು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Chandrappa-of-Kudlihere-appointed-for-DSS

ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಆಶಯದಂತೆ ಸಮುದಾಯದ ಜಾಗೃತಿ ಮೂಡಿಸುವುದು, ಸಂವಿಧಾನಾತ್ಮಕ ಹಕ್ಕುಗಳಿಗಾಗಿ ಹೋರಾಡುವುದು ಮತ್ತು ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ನೇಮಕಾತಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.